9:32 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಶಿವಮೊಗ್ಗ ಕೊಲೆ ಪ್ರಕರಣ: ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ 

24/02/2022, 10:01

ಬೆಂಗಳೂರು(reporterkarnataka.com):

  • ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿದೆ. ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ತೀವ್ರವಾಗಿ ನಡೆಯುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ ಎಂದರು.

    ಕಾಂಗ್ರೆಸ್ ಅನುಭವದ ಮಾತು:

    ಇದು ಸರಕಾರಿ ಪ್ರಾಯೋಜಿತ ಮೆರವಣಿಗೆ, ಸೆಕ್ಷನ್ 144 ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು, ಕಾಂಗ್ರೆಸ್ ನವರು ಈ ಹಿಂದೆ ಸರಕಾರಿ ಪ್ರಾಯೋಜಿತ ಕೆಲಸಗಳನ್ನು ಮಾಡಿದ್ದಾರೆ. ಅದರ ಅನುಭವದಿಂದ ಆ ಮಾತುಗಳು ಆಡಿದ್ದಾರೆ ಲೇವಡಿ ಮಾಡಿದರು.

    ದಿಲ್ಲಿ ಪ್ರಯಾಣದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸದ್ಯಕ್ಕೆ ದಿಲ್ಲಿ ಹೋಗುವ ಉದ್ದೇಶ ಇಲ್ಲ ಎಂದರು.

  • ಇತ್ತೀಚಿನ ಸುದ್ದಿ

    ಜಾಹೀರಾತು