8:53 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಶಿವಮೊಗ್ಗ ವಿಮಾನ ನಿಲ್ದಾಣ: ಮಧ್ಯ ಕರ್ನಾಟಕದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲಿದೆಯೇ ? ಬೆಂಗಳೂರಿಗೆ ಪರ್ಯಾಯವೇ?

15/06/2021, 06:45

ಪದ್ಮಾ ಎಸ್.ಸೊರಬ ಶಿವಮೊಗ್ಗ

info.reporterkarnataka@gmail.com

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕನಸಿನ ಕೂಸಾದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳ್ಳುವ ಎಲ್ಲ ಸೂಚನೆಗಳಿವೆ.

ಬೆಂಗಳೂರು ವಿಮಾನ ನಿಲ್ದಾಣ ಬಿಟ್ಟರೆ ಶಿವಮೊಗ್ಗದ ವಿಮಾನ ನಿಲ್ದಾಣವನ್ನೇ ಸುಸಜ್ಜಿತ ಏರ್ ಫೋರ್ಟ್ ಮಾಡುವ ಕನಸನ್ನು ಮುಖ್ಯಮಂತ್ರಿ ಹೊಂದಿದ್ದಾರೆ. ಹಣಕಾಸಿನ ಅಡಚಣೆ ನಡುವೆಯೂ ತನ್ನ ತವರು ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳುವ ಸಂಕಲ್ಪ ಸಿಎಂ ಹೊಂದಿದ್ದಾರೆ.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದು ಮಧ್ಯ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನವಾಗಲಿದೆ.

ಇದರ ಮೂಲಕ  ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಗತಿ ನಿರೀಕ್ಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಪ್ರಗತಿ ಸಾಧ್ಯವಾಗಲಿದೆ. ಹೆಚ್ಚಿನ ಕೈಗಾರಿಕೆಗಳು ಪ್ರಾರಂಭವಾಗಿ ಉದ್ಯೋಗವಕಾಶ ಸೃಷ್ಟಿಯಾಗಲಿದೆ ಎಂದು ವ್ಯಾಖ್ಯಾನಿಸಲಾಗಿದೆ

ವಿಮಾನ ನಿಲ್ದಾಣದ ರನ್ ವೇ ಕಾಮಗಾರಿ, ಸಂಪರ್ಕ ರಸ್ತೆ, ಪೆರಿಮೀಟರ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಂಪೌಡ್ ನಿರ್ಮಾಣ ಬಹುತೇಕ ಪೂರ್ಣಗೊಂಡಿದೆ. 15,900 ಮೀಟರ್ ಪೈಕಿ 11,500 ಮೀಟರ್ ಕಾಂಪೌಡ್ ನಿರ್ಮಾಣ ಪೂರ್ಣಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು