ಇತ್ತೀಚಿನ ಸುದ್ದಿ
Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್
13/11/2025, 15:43
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ವ್ಯಕ್ತಿಯೊರ್ವ ಏಕಾಏಕಿ ರಸ್ತೆಗೆ ಬಂದ ಕಾರಣ ಲಾರಿಯ ಚಕ್ರಕ್ಕೆ ಸಿಲುಕಿ ಎರಡು ಕಾಲು ಕಟ್ ಆಗಿರುವ ಘಟನೆ ತಳುವೆ ಸಮೀಪ ಬುಧವಾರ ಸಂಜೆ ನಡೆದಿದೆ.
ತಾಲೂಕಿನ ಕೊಪ್ಪ ತೀರ್ಥಹಳ್ಳಿ ನಡುವಿನ ತಳುವೆ ಬಳಿ ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಕಾಲು ಕಟ್ ಆಗಿದೆ. ಆದರೆ, ಈ ಅಪಘಾತಕ್ಕೆ ಆ ವ್ಯಕ್ತಿಯೇ ಕಾರಣ ಎಂಬ ಮಾತು ಸ್ಥಳೀಯರಿಂದ ಕೇಳಿ ಬರುತ್ತಿದೆ. ಬುಧವಾರ ಬೆಳಗ್ಗೆಯಿಂದ ರಸ್ತೆಯಲ್ಲಿ ಓಡಾಡುವ ಬಸ್ ಹಾಗೂ ಕಾರುಗಳಿಗೆ ಅಡ್ಡ ಹೋಗುತ್ತಿದ್ದ ಎಂದು ತಿಳಿದು ಬಂದಿದೆ. ಮಧ್ಯಾಹ್ನ ಖಾಸಗಿ ಬಸ್ ವೊಂದಕ್ಕೆ ಅಡ್ಡ ಹೋಗಿದ್ದಾನೆ ಬಸ್ ನಿಧಾನವಾಗಿ ಬರುತ್ತಿದ್ದ ಕಾರಣ ಬ್ರೇಕ್ ಹಾಕಲಾಗಿದೆ. ನಂತರ ಬಸ್ ಡ್ರೈವರ್ ಈತನಿಗೆ ಬೈದು ಬುದ್ಧಿವಾದ ಹೇಳಿ ಹೋಗಿದ್ದರು ಎಂದು ತಿಳಿದುಬಂದಿದೆ.
ಆದರೂ ಸಂಜೆ ಲಾರಿ ಬರುತ್ತಿದ್ದದ್ದನ್ನು ನೋಡಿ ಏಕಾಏಕಿ ರಸ್ತೆಗೆ ಹಾರಿದ್ದಾನೆ. ಈ ವೇಳೆ ಲಾರಿ ಚಾಲಕ ಎಷ್ಟೇ ತಪ್ಪಿಸಿದರು ಲಾರಿ ಹಿಂದಿನ ಚಕ್ರಕ್ಕೆ ಸಿಲುಕಿ ಕಾಲು ಕಟ್ ಮಾಡಿಕೊಂಡಿದ್ದಾನೆ.
ಈ ಪ್ರಕರಣ ವಿಚಿತ್ರವಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ.












