12:54 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

20/03/2026, 12:38

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಿಕ್ಷಾ ಚಾಲಕನೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಸಿದ್ದಾಪುರದ ಪಾಲಿಬೆಟ್ಟ ರಸ್ತೆಯಲ್ಲಿ ವಾಸವಿರುವ ಮೊಹಮ್ಮದ್ ಎಂಬುವವರ ಮಗ ಅನ್ಸಾರ್ ( 34) ಎಂದು ಗುರುತಿಸಲಾಗಿದ್ದು, ಆತ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ.
ಮಾಹಿತಿಯ ಪ್ರಕಾರ, ಯುಗಾದಿ ಹಬ್ಬದ ಹಿನ್ನೆಲೆ ಶಾಲೆಗೆ ರಜೆ ಇದ್ದ ಕಾರಣ ಬಾಲಕಿಯೂ ಸ್ಪೆಷಲ್ ಕ್ಲಾಸ್ ಗೆ ತೆರಳಲೆಂದು ನೆಲ್ಯಹುದಿಕೇರಿಯಲ್ಲಿ ನಿಂತಿದ್ದ ಸಂದರ್ಭ ಆಚೆಗೆ ಬಂದ ಆಟೋ ಚಾಲಕ ತಾನು ಶಾಲೆ ಕಡೆಗೆ ತೆರಳುವುದಾಗಿ ಹೇಳಿದ ಮೇರೆಗೆ ಬಾಲಕಿ ಆಟೋ ಹತ್ತಿದ್ದಾಳೆ. ಬಳಿಕ ಸಿದ್ದಾಪುರದಲ್ಲಿರುವ ತನ್ನ ಶಾಲೆ ತಲುಪುತ್ತಿದ್ದಂತೆ ನಿಲ್ಲಿಸುವಂತೆ ಚಾಲಕನಿಗೆ ಹೇಳಿದರು ಆತ ಅಲ್ಲಿ ನಿಲ್ಲಿಸದೆ ಅಮ್ಮತ್ತಿ ಕಡೆಗೆ ವೇಗವಾಗಿ ಆಟೋ ಚಲಾಯಿಸಿ ಅಲ್ಲಿಂದ ಪಾಲಿಬೆಟ್ಟ ಮಾರ್ಗದಲ್ಲಿ ಕರೆದೊಯ್ದು, ನಿರ್ಜನ ಪ್ರದೇಶದಲ್ಲಿ ಆಟೋ ನಿಲ್ಲಿಸಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂದರ್ಭ ಬಾಲಕಿ ಕಿರುಚಿದ್ದು, ಹೆದರಿದ ಚಾಲಕ ಆಕೆಯ ಬಳಿ ಕಿರುಚಬೇಡ ಎಂದು ಹೇಳಿ ಮತ್ತೆ ಸಿದ್ದಾಪುರಕ್ಕೆ ಕರೆತಂದು ಬಿಟ್ಟಿದ್ದಾನೆ ಎಂದು ಬಾಲಕಿ ತನ್ನ ಪೋಷಕರ ಬಳಿ ಅಳಲು ತೋಡಿಕೊಂಡಿದ್ದಾಳೆ ಎನ್ನಲಾಗಿದೆ.
ಘಟನೆ ಸಂಬಂಧ ಬಾಲಕಿಯ ಪೋಷಕರು ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಿ, ಆಟೋವನ್ನು ವಶಕ್ಕೆ ಪಡೆದುಕೊಂಡಿರುವ ಸಿದ್ದಾಪುರ ಪೊಲೀಸರು ಪೋಕ್ಸೋ ಕಾಯ್ದೆ ಹಾಗೂ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು