4:43 PM Saturday6 - December 2025
ಬ್ರೇಕಿಂಗ್ ನ್ಯೂಸ್
Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ… ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ

ಇತ್ತೀಚಿನ ಸುದ್ದಿ

Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ

06/12/2025, 16:39

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಖಾಸಗಿ ಶಾಲಾ ವಾಹನ ಹಾಗೂ ಬೈಕ್ ನಡುವೆ ಕುಶಾವತಿ ಸಮೀಪ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಶಾವತಿ ರಸ್ತೆ ತಿರುವಿನಲ್ಲಿ ಶಿವಮೊಗ್ಗದಿಂದ ದಾವಣಗೆರೆಯ ಹೊನ್ನಾಳಿಯ ಶಾಲಾ ಪ್ರವಾಸದ ವಿದ್ಯಾರ್ಥಿಗಳು ಪಯಣಿಸುತ್ತಿದ್ದ ಬಸ್ಸು ಚಾಲಕ ಅತೀ ವೇಗದಿಂದ ಅಪಾಯಕಾರಿ ತಿರುವಿನಲ್ಲಿ ನಿಯಂತ್ರಕ್ಕೆ ಬಾರದೇ ಬೈಕ್ ಸವಾರನ ಮೇಲೆ ಹತ್ತಿದೆ. ಕನಿಷ್ಠ 10ಮೀಟರ್ ತನಕ ಬಸ್ಸಿನ ಅಡಿಯಲ್ಲೇ ಬೈಕ್ ರಸ್ತೆ ಉಜ್ಜಿದ್ದು , ಬೈಕ್ ಸವಾರ ಗಂಭೀರ ಸ್ಥಿತಿಯಲ್ಲಿದ್ದು, ತಕ್ಷಣವೇ ಸ್ಥಳೀಯರು ಆಸ್ಪತ್ರೆ ದಾಖಲಿಸಿದ್ದಾರೆ.

ಬಸ್ ಚಾಲಕನ ಅತಿ ವೇಗದ ಚಾಲನೆಯೇ ಒಂದು ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಶಾಲಾ ಮಕ್ಕಳು ಇರುವಂತಹ ಸಂದರ್ಭದಲ್ಲಿ ಇಂತಹ ವೇಗದ ಅವಶ್ಯಕತೆ ಇತ್ತಾ ಎಂಬ ಪ್ರಶ್ನೆ ಸಹ ಮೂಡಿದೆ. ಇದು ಪ್ರಭಾಸದ ಖಾಸಗಿ ಬಸ್ ಆಗಿದ್ದು ತೀರ್ಥಹಳ್ಳಿಯಲ್ಲೂ ಸಹ ಖಾಸಗಿ ಶಾಲೆಯ ಬಸ್ಗಳು ಅತಿ ವೇಗದಿಂದ ಬಸ್ಗಳನ್ನ ಚಲಾಯಿಸುತ್ತಿದ್ದಾರೆ . ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಹಾಗೂ ತೀರ್ಥಹಳ್ಳಿ ಪೊಲೀಸರು ಎಚ್ಚರಿಕೆ ವಹಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು