3:16 PM Wednesday18 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಶಿವಮೊಗ್ಗದ ಕೇಂದ್ರ ಕಾರಾಗೃಹ: ಬೀಡಿಗಾಗಿ ಜೈಲಿನ 778 ಖೈದಿಗಳ ಪ್ರತಿಭಟನೆ; ಮನವೊಲಿಕೆಗೆ ಅಧಿಕಾರಿಗಳ ಯತ್ನ

02/09/2024, 17:29

ಶಿವು ರಾಠೋಡ ಹುಣಸಗಿ ಶಿವಮೊಗ್ಗ

info.reporterkarnataka@gmail.com

ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಬೀಡಿಗಾಗಿ ಪ್ರತಿಭಟನೆ ನಡೆಸಿದ್ದಾರೆ. ಜೈಲಿನ 778 ಕೈದಿಗಳು ಇಂದು ಬೆಳಗ್ಗಿನ ಉಪಹಾರವನ್ನು ಸೇವಿಸಿದೇ ಪ್ರತಿಭಟನೆ ನಡೆಸಿದ್ದಾರೆ.
ಕಾರಾಗೃಹ ಇಲಾಖೆಯ ಬಿಗಿ ಕ್ರಮದಿಂದ ಜೈಲಿನಲ್ಲಿ ಬಿಡಿಯು ಸಹ ಸಿಗುತ್ತಿಲ್ಲ. ಆದರೆ ಬೀಡಿ ಸಿಗರೇಟಿನ ಚಟಕ್ಕೆ ಅಡಿಕ್ಟ್ ಆಗಿರುವ ಕೈದಿಗಳು ಅದರಿಂದ ಬಿಡಿಸಿಕೊಳ್ಳಲಾಗದೇ ಒದ್ದಾಡುತ್ತಿದ್ದಾರೆ.
ಇದೇ ಕಾರಣಕ್ಕೆ ಇಂದು ಒಗ್ಗಟ್ಟಿನ ಪ್ರತಿಭಟನೆ ನಡೆಸುತ್ತಿದ್ದಾರೆ. ಜೈಲಿನಲ್ಲಿ ಬೆಳಗಿನ ಉಪಾಹಾರವನ್ನು ತ್ಯಜಿಸಿರುವ ಕೈದಿಗಳು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಹೇಳುತ್ತಿದ್ದಾರೆ.
ಅವರ ಮನವೊಲಿಸುವ ಸಲುವಾಗಿ ಕಾರಾಗೃಹ ಇಲಾಖೆಯ ಅಧಿಕಾರಿಗಳ ತಂಡ ಪ್ರಯತ್ನ ನಡೆಸುತ್ತಿದೆ. ಆದಾಗ್ಯು ಅಧಿಕಾರಿಗಳ ಮಾತಿಗೆ ಕೈದಿಗಳು ಸುಮ್ಮನಾಗುತ್ತಿಲ್ಲ. ಬೇಕೆಬೇಕು ಬೀಡಿಯಾದರೂ ಬೇಕು ಎಂದು ಪ್ರತಿಭಟನೆ ಮುಂದುವರೆಸಿದ್ದಾರೆ ಎಂದು ಹೇಳಲಾಗಿದೆ.

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಇತ್ತೀಚೆಗೆಷ್ಟೆ ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ನೇತೃತ್ವದ 100ಕ್ಕೂ ಹೆಚ್ಚು ಪೊಲೀಸರ ತಂಡ ರೇಡ್ ನಡೆಸಿತ್ತು. ಈ ವೇಳೆ ಮ್ಯಾಚ್ ಬಾಕ್ಸ್ ಹಾಗೂ ಬೀಡಿಯ ಬಂಡಲ್ ಮತ್ತು ಚಾರ್ಜರ್ ವಯರ್ ಸಿಕ್ಕಿತ್ತು. ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಹ ದಾಖಲಾಗಿತ್ತು. ಇದರ ಬೆನ್ನಲ್ಲೆ ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್‌ನ ಇಬ್ಬರು ಆರೋಪಿಗಳು ಇನ್ ಆಗಿದ್ದರು. ಆನಂತರ ಜೈಲಿನಲ್ಲಿ ಇನ್ನಷ್ಟು ಬಂದೋಬಸ್ತ್ ಮಾಡಲಾಗಿತ್ತು. ಇವೆಲ್ಲದರ ಪರಿಣಾಮವಾಗಿ ಕೈದಿಗಳಿಗೆ ಬೀಡಿ ಸಿಗದಂತಾಗಿದೆ. ಇದರಿಂದ ಸಿಟ್ಟಿಗೆದ್ದಿರುವ ಕೈದಿಗಳು ಪ್ರತಿಭಟನೆಗೆ ಇಳಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು