8:13 AM Thursday27 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಶಿವಮೊಗ್ಗ: ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

20/11/2023, 21:55

ಶಿವಮೊಗ್ಗ(reporterkarnataka.com): ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಇದರ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಮಂಗಳಾ ಆಸ್ಪತ್ರೆಯ ಆಯುರ್ವೇದ ಹಾಗೂ ಮೂಲವ್ಯಾಧಿ ಕ್ಷಾರ ಚಿಕಿತ್ಸಾ ತಜ್ಞ ಮತ್ತು ಬರಹಗಾರ ಡಾ ಸುರೇಶ ನೆಗಳಗುಳಿ ಅವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ದಿನಾಂಕ 19ನವೆಂಬರ್ 23 ಭಾನುವಾರದಂದು ಶಿವಮೊಗ್ಗದ ಕರ್ನಾಟಕ ಸಭಾಭವನದಲ್ಲಿ ಕರ್ನಾಟಕ ಮರು ನಾಮಕರಣದ ಸುವರ್ಣ ಸಂಭ್ರಮದ ನಿಮಿತ್ತ ಏರ್ಪಡಿಸಲಾಗಿದ್ದ ಪಂಚ ಭಾಷಾ ಕವಿಗೋಷ್ಠಿಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.

ವೇದಿಕೆ ಅಧ್ಯಕ್ಷ ಕೊಟ್ರೇಶ್ ಉಪ್ಪಾರ್, ಜಿಲ್ಲಾಧ್ಯಕ್ಷೆ ಡಾ. ಹಸೀನಾ ಕೆ. ಎಚ್., ರಂಜಾನ್ ದರ್ಗಾ, ನಾಗರಾಜ್ ದೊಡ್ಮನಿ, ಖ್ಯಾತ ಗಜಲ್ ಕವಿ ಸಿದ್ಧರಾಮ‌ ಹೊನ್ಕಲ್, ಮಂಗಳೂರಿನ‌ ನ್ಯಾಯವಾದಿ, ಕವಯಿತ್ರಿ ವೇದಿಕೆಯ ಉಪಾಧ್ಯಕ್ಷೆ ಪರಿಮಳಾ ಮಹೇಶ್, ಉಳುವಂಗಡ ಕಾವೇರಿ ಉದಯ, ಬಿ.ಎಂ. ಬಶೀರ್, ನಾಗೇಶ್ ಎಂ ಅನ್ವೇಕರ, ಉಳ್ಳಾಲದ ಆರಕ್ಷಕ ಇಲಾಖೆಯ ಮನ್ಸೂರ್ ಮುಲ್ಕಿ,ಲತಾ ಎಂ. ಕೆ. ತುರುವೇಕೆರೆ, ಜೆ. ಜಿ. ನರಸಿಂಹ ಮೂರ್ತಿ ಮತ್ತಿತರ ಹಲವು ಗಣ್ಯರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು