11:04 PM Thursday29 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

Shivamogga | ಗುಡ್ಡ ಕುಸಿಯುವ ಭೀತಿ: ಶಿವಮೊಗ್ಗ- ತೀರ್ಥಹಳ್ಳಿ ಸಂಪರ್ಕದ ಭಾರತೀಪುರ ಫ್ಲೈ ಓವರ್ ಒಂದು ಭಾಗ ಬಂದ್

11/07/2025, 16:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ

info.reporterkarnataka@gmail.com

ಕೋಟಿ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯಾಗಿದ್ದ ಭಾರತೀಪುರ ಫ್ಲೈ ಓವರ್ ಈಗ ಒಂದು ಭಾಗ ಸಂಚಾರ ಬಂದ್ ಮಾಡಲಾಗಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುವಾಗ ಎಡ ಭಾಗದಲ್ಲಿ ಬ್ಯಾರಿಕೆಡ್ ಹಾಕಿ ಸಂಚಾರ ಬಂದ್ ಮಾಡಲಾಗಿದ್ದು, ಧರೆ ಕುಸಿಯುವ ಭೀತಿಯಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.
ಮಳೆಗಾಲ ಸಂದರ್ಭದಲ್ಲಿ ಎಲ್ಲೆಡೆ ಭೂ ಕುಸಿತ, ಧರೆ ಕುಸಿತ ಆಗುತ್ತದೆ. ಆದರೆ ಭಾರತೀಪುರದಲ್ಲಿ ಧರೆ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಹಾಗೂ ಗುತ್ತಿಗೆದಾರರೇ ಕಾರಣ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಮಳೆಗಾಲದಲ್ಲಿ ಕುಸಿಯುತ್ತದೆ ಎಂಬ ಪರಿಜ್ಞಾನ ಸಹ ಇಲ್ಲದೆ ಇಲ್ಲಿಯವರೆಗೆ ಗುಡ್ಡ ಕುಸಿಯುವುದನ್ನು ತಡೆಯಲು ಪ್ರಯತ್ನ ಸಹ ಮಾಡಿಲ್ಲ. ಈಗ ಕುಸಿದು ಬಿದ್ದರೆ ತಕ್ಷಣ ಅದರಿಂದ ತುರ್ತು ಕಾಮಗಾರಿ ಎಂದು ಮತ್ತೆ ಬಿಲ್ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.


ಈ ಮಧ್ಯೆ ಕುಡು ಮಲ್ಲಿಗೆಯಿಂದ ಕೂಗಳತೆ ದೂರದಲ್ಲಿ ಮತ್ತೊಂದು ರಸ್ತೆ ಮಾಡುತ್ತಿದ್ದು ಅದು ಚಿಟ್ಟೆಬೈಲು ಸಂಪರ್ಕ ಮಾಡುತ್ತದೆ ಎನ್ನಲಾಗುತ್ತಿದೆ. ಈಗಾಗಲೇ ಅದಕ್ಕೆ ಜಲ್ಲಿ ಕಲ್ಲು ಸಹ ಹಾಕಲಾಗಿದೆ. ಅದಕ್ಕೆ ಕಾರಣ ಒಂದು ವೇಳೆ ಗುಡ್ಡ ಕುಸಿತ ದೊಡ್ಡ ಮಟ್ಟದಲ್ಲಿ ಆದರೆ ಪರ್ಯಾಯ ಮಾರ್ಗ ಎಂಬ ಮಾತು ಕೇಳಿ ಬಂದಿದೆ. ಇವರ ಕೆಲಸ ನೋಡುತ್ತಿದ್ದರೆ ಗುಡ್ಡ ಕುಸಿಯುವುದನ್ನೇ ಅಧಿಕಾರಿಗಳು ಕಾಯುತ್ತಿದ್ದಾರಾ? ಎಂಬುದಾಗಿ ಸಾರ್ವಜನಿಕರು ಪ್ರೆಶ್ನೆ ಮಾಡುತ್ತಿದ್ದಾರೆ.
ಒಟ್ಟಿನಲ್ಲಿ ಇದೇ ತರ ಮಳೆ ಜಾಸ್ತಿ ಆದರೆ ಭಾರತೀಪುರ ಫ್ಲೈ ಓವರ್ ಮುಚ್ಚುತ್ತದೆಯೇ ಎಂಬ ಪ್ರೆಶ್ನೆ ಉದ್ಭವವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು