12:16 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Shivamogga | ತೀರ್ಥಹಳ್ಳಿ ವೈದ್ಯರ ವರ್ಗಾವಣೆ ತಡೆ ಹಿಡಿಯುವಂತೆ ಮಾಜಿ ಸಚಿವ ಕಿಮ್ಮನೆ ಮನವಿ

09/07/2025, 16:22

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ವೈದ್ಯರ ವರ್ಗಾವಣೆ ತಡೆ ಹಿಡಿಯುವಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮನವಿ ಮಾಡಿದ್ದಾರೆ.
ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ಪ್ರಮುಖ ಆರು ವೈದ್ಯರನ್ನು ವರ್ಗಾವಣೆಗೊಳಿಸಿ ಎಂದು ಸರ್ಕಾರ ಆದೇಶ ಮಾಡಿತ್ತು. ಸರ್ಕಾರದ ಆದೇಶದ ವರದಿಯನ್ನ ಗಮನಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಳಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ದೂರವಾಣಿ ಮೂಲಕ ಮಾತನಾಡಿದ್ದು ವೈದ್ಯರ ವರ್ಗಾವಣೆಯನ್ನು ತಡೆ ಹಿಡಿಯುವಂತೆ ಮನವಿ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಇದ್ದಂತಹ ಆರು ವೈದ್ಯರನ್ನು ವರ್ಗಾವಣೆ ಮಾಡಲು ಆದೇಶ ಮಾಡಲಾಗಿದೆ. ಆದರೆ ಇಲ್ಲಿ ಬೇರೆ ವೈದ್ಯರ ನೇಮಕ ಆಗಿಲ್ಲ. ಅನಸ್ತೇಶಿಯ ವೈದ್ಯರು ಒಬ್ಬರೇ ಇದ್ದಾರೆ. ತಿಂಗಳಿಗೆ ಸುಮಾರು 40 ಹೆರಿಗೆಗಳು ಆಗುತ್ತವೆ.
ಈ ಎಲ್ಲಾ ಕಾರಣದಿಂದ ತಾತ್ಕಾಲಿಕವಾಗಿ ವರ್ಗಾವಣೆ ಆದೇಶವನ್ನು ತಡೆ ಹಿಡಿಯುವಂತೆ ಮನವಿ ಮಾಡಿದ್ದಾರೆ.
ಈಗಾಗಲೇ ಆರಗ ಜ್ಞಾನೇಂದ್ರ ಸಹ ವರ್ಗಾವಣೆ ಮಾಡಬಾರದು ಎಂದು ಪತ್ರ ಬರೆದಿದ್ದರು. ಈಗ ಕಿಮ್ಮನೆ ರತ್ನಾಕರ್ ಸಹ ತಡೆ ಹಿಡಿಯಬೇಕೆಂದು ತಿಳಿಸಿದ್ದು ವೈದ್ಯರು ವರ್ಗಾವಣೆ ಆಗುತ್ತಾರಾ? ಅಥವಾ ವರ್ಗಾವಣೆಗೆ ತಡೆ ಸಿಗುತ್ತಾ? ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು