5:47 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಶಿವಮೊಗ್ಗ: ಆಟವಾಡುತ್ತಿದ್ದಾಗ ಜೋಕಾಲಿ ಕುಣಿಕೆ ಬಿಗಿದು ಬಾಲಕಿ ಸಾವು

24/04/2026, 18:40

ಶಿವಮೊಗ್ಗ(reporterkarnataka.com): ಜೋಕಾಲಿ ಆಡಲು ಹೋಗಿ, ಕುಣಿಕೆ ಬಿಗಿದು ಬಾಲಕಿ ಸಾವಿಗೀಡಾದಂತಹ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಮೂರು ದಿನದ ಹಿಂದೆ ಘಟನೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ.ಮೃತ ಬಾಲಕಿಯನ್ನು 9 ವರ್ಷದ ಪ್ರಣಮ್ಯ ಎಂದು ಗುರುತಿಸಲಾಗಿದೆ. ಲಕ್ಕಿನಕೊಪ್ಪದ ಚಿಕ್ಕಮ್ಮನ ಮನೆಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಪ್ರಣಮ್ಯ ರೂಮಿನಲ್ಲಿ ಕಟ್ಟಿದ್ದ ಜೋಕಾಲಿಯಲ್ಲಿ ಆಡುತ್ತಿದ್ದಳು, ಬಾಗಿಲು ಹಾಕಿ ಜೋಕಾಲಿ ಆಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಆಡುತ್ತಿದ್ದ ಜೋಕಾಲಿಯೇ ನೇಣಿನಂತೆ ಕತ್ತನ್ನು ಸುತ್ತಿಕೊಂಡು ಬಾಲಕಿ ಸಾವನ್ನಪ್ಪಿದ್ದಾಳೆ.
ಬಾಲಕಿ ಪ್ರಣಮ್ಯ ವಿದ್ಯಾನಗರದ ನಿವಾಸಿಯಾಗಿದ್ದು, ಲಕ್ಕಿನಕೊಪ್ಪದ ಚಿಕ್ಕಮ್ಮನ ಮನೆಗೆ ಬೇಸಿಗೆ ರಜೆ ಕಳೆಯಲು ಹೋಗಿದ್ದ ವೇಳೆ ಈ ದುರಂತ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟಿನಲ್ಲಿ ಈ ಬಾರಿಯ ಬೇಸಿಗೆ ರಜೆ ಪೋಷಕರಿಗೆ ಸಜೆಯಂತಾಗಿದ್ದು, ಮಕ್ಕಳನ್ನು ನೋಡಿಕೊಳ್ಳುವುದೇ ಒಂದು ದೊಡ್ಡ ಸವಾಲಾಗಿದೆ. ಬೇಸಿಗೆಯ ಸೆಖೆಯಿಂದಾಗಿ ನೀರಿನ ಮೂಲಗಳಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ ರಾಜ್ಯದಲ್ಲಿ ಎರಡಂಕಿ ದಾಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು