10:21 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಶಿವಮೊಗ್ಗ: ಪೊಲೀಸರ ಮೇಲೆ ದಾಳಿಗೆ ಯತ್ನ; ಕಾಲಿಗೆ ಗುಂಡು ಹಾರಿಸಿ ಆರೋಪಿಯ ಬಂಧನ

16/08/2022, 19:02

ಶಿವಮೊಗ್ಗ(reporterkarnataka.com): ಶಿವಮೊಗ್ಗದಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಶಾಲಾ-ಕಾಲೇಜು ಬಂದ್ ಆಗಿದೆ. 144 ಸೆಕ್ಷನ್ ಜಾರಿಯಾಗಿದೆ. ಪೊಲೀಸರು

ತಮ್ಮ ಮೇಲೆ ದಾಳಿ ನಡೆಸಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಸೋಮವಾರ ನಗರದ ಗಾಂಧಿ ಬಜಾರ್‌ನಲ್ಲಿ ಮನೆ ಕಡೆಗೆ ತೆರಳುತ್ತಿದ್ದ ಪ್ರೇಮ್‌ಕುಮಾರ್ ಸಿಂಗ್‌ಗೆ ಚಾಕುವಿನಿಂದ ಇರಿಯಲಾಗಿತ್ತು. ಪ್ರಕರಣದ ಇಬ್ಬರು ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದರು. ಘಟನೆಯ ಪ್ರಮುಖ ಆರೋಪಿ, ಮಾರ್ನಮಿಬೈಲ್ ನಿವಾಸಿ ಮೊಹಮದ್ ಜಬೀ ಅಲಿಯಾಸ್ ಚರ್ಬಿ(30) ಬಂಧಿಸಲು ಮಂಗಳವಾರ ಬೆಳಗ್ಗಿನ ಜಾವ ಪೊಲೀಸರು ಸುತ್ತುವರೆದಿದ್ದರು.

ಎನ್‌ಟಿ ರಸ್ತೆಯ ಫಲಕ್ ಪ್ಯಾಲೇಸ್ ಬಳಿ ಈತನನ್ನು ಸುತ್ತುವರೆದಾಗ ಪೊಲೀಸರ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ. ತಕ್ಷಣ ವಿನೋಬನಗರ ಠಾಣೆ ಪಿಎಸ್‌ಐ ಮಂಜುನಾಥ ಕುರಿ ತಮ್ಮ ಬಳಿ ಇದ್ದ ಪಿಸ್ತೂಲಿನಿಂದ ಚರ್ಬಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಆತನನ್ನು ಬಂಧಿಸಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಪಿಎಸ್‌ಐ ಕೂಡ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು