3:54 AM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್ ಬಂಧನ

29/06/2025, 17:58

ಶಿವಮೊಗ್ಗ(reporterkarnataka.com):ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಹಪ್ರಾಧ್ಯಾಪಕ ಹಾಗೂ ಶಸ್ತ್ರಚಿಕಿತ್ಸೆಕರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ಅಶ್ವಿನ್ ಹೆಬ್ಬಾರ್ ಅವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಇಂಟರ್ನ್ಶಿಪ್ ಹಾಗೂ ಎಮ್ ಎಸ್ ಓದುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ಹಾಗೂ ಜಾತಿ ನಿಂದನ ಪ್ರಕರಣದಲ್ಲಿ ಅಶ್ವಿನ್ ಹೆಬ್ಬಾರ್ ಆರೋಪಿಯಾಗಿದ್ದರು. ಈ ಪ್ರಕರಣ ಕಾಲೇಜಿನಲ್ಲಿ ಸಂಚಲನ ಮೂಡಿಸಿತ್ತು.ಪ್ರಕರಣ ನಡೆದ ನಂತರ ಶಿವಮೊಗ್ಗದ ಮಹಿಳಾ ಠಾಣೆಯಲ್ಲಿ ಜೂ.20 ರಂದು ದೂರು ದಾಖಲಾಗಿತ್ತು. ದಾಖಲಾಗಿ ಈಗ ಏಳು ದಿನ ಕಳೆದಿತ್ತು. ದೂರು ದಾಖಲಾಗಿ ನಾಲ್ಕು ದಿನ ಕಳೆದರೂ ಆರೋಪಿ ಬಂಧನವಾಗಿಲ್ಲ ಎಂದು ಕಾಲೇಜು ವಿದ್ಯಾರ್ಥಿಗಳು ಎರಡು ದಿನಗಳ ಕಾಲ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದ್ದರು.ಪ್ರತಿಭಟನೆಗೂ ಮುನ್ನ ಸಂಘ ಸಂಸ್ಥೆಗಳು ಆರೋಪಿ ಬಂಧನಕ್ಕೆ ಗಡವು ಸಹ ನೀಡಿದ್ದರು. ಡಿವೈಎಸ್ಪಿ ಬಾಬು ಅಂಜನಪ್ಪ ಅವರ ನೇತೃತ್ವದ ತಂಡ ವೈದ್ಯರನ್ನ ಬಂಧಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು