5:37 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Shivamogga | ತೀರ್ಥಹಳ್ಳಿ: 3 ಮಂದಿ ಗೋ ಕಳ್ಳರ ಬಂಧನ; ಓಮಿನಿ ಕಾರು ವಶ

20/09/2025, 16:31

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕಳೆದ ಹಲವಾರು ದಿನಗಳಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗೋ ಕಳ್ಳತನವಾಗುತ್ತಿರುವ ಬಗ್ಗೆ ಅದರಲ್ಲೂ ಕಾರಿನಲ್ಲಿ ಗೋವುಗಳನ್ನು ತುಂಬಿಕೊಂಡು ಹೋಗುವ ದೃಶ್ಯಗಳು ವರದಿಯಾಗುತ್ತಿದ್ದವು. ಆ ನಂತರ ಬಿಜೆಪಿ ವತಿಯಿಂದ ಈ ವಿಚಾರವಾಗಿ ಪ್ರತಿಭಟನೆ ಸಹ ನಡೆದಿತ್ತು.
ಈ ವಿಚಾರದಲ್ಲಿ ತನಿಖೆ ಚುರುಕುಗೊಳಿಸಿದ ತೀರ್ಥಹಳ್ಳಿ ಪೊಲೀಸರು ಪಟ್ಟಣದ ಬೆಟ್ಟಮಕ್ಕಿಯ ಭೂತರಾಯನಕಟ್ಟೆ ಬಳಿ ಗೋ ಕಳ್ಳತನ ಮಾಡಲು ಬಂದಿದ್ದ ಮೂವರನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಓರ್ವ ಹಾಗೂ ಲಿಂಗಾಪುರದ ಇಬ್ಬರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರತಿ ನಿತ್ಯ ಗೋ ಕಳ್ಳತನ ಮಾಡಿ ಗೋ ಸಾಗಾಟ ಮಾಡಲಾಗುತ್ತಿತ್ತು. ಇದರಿಂದ ಜಾಗೃತಗೊಂಡ ಪೊಲೀಸ್ ತಂಡ ಇಂದು ಮೂವರನ್ನು ಬಂಧಿಸಿದೆ. ಬೆಟ್ಟಮಕ್ಕಿ ಬಳಿ ಓಮಿನಿ ಕಾರಿನ ಮೂಲಕ ಗೋ ಕಳ್ಳತನ ಮಾಡಲು ಬಂದಾಗಲೇ ಪೋಲೀಸರ ಕೈಗೆ ಕಳ್ಳರು ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಾದ ಮೌಸಿನ್ ಖಾನ್, ಮಹಮದ್ ಮುಸ್ತಾಕ್, ಶಿರಾಜ್ ಉದ್ದಿನ್ ಎಂಬ ಮೂವರನ್ನು ಬಂಧಿಸಲಾಗಿದೆ. ಈ ಮೂವರು ರಸ್ತೆ ಬದಿಯಲ್ಲಿ ಮಲಗಿರುವ ಜಾನುವಾರುಗಳನ್ನು ಒಮಿನಿ ಕಾರಿನಲ್ಲಿ ಹಾಕಿಕೊಂಡು ಶಿವಮೊಗ್ಗಕ್ಕೆ ತೆಗೆದುಕೊಂಡು ಹೋಗಿ ಮಾರಾಟ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.
ಮೂರು ಆರೋಪಿಗಳನ್ನು ಮತ್ತು ಅವರು ಕಳ್ಳತನ ಮಾಡಲು ತಂದಿದ್ದ ಓಮಿನಿ ಕಾರನ್ನು ವಶಕ್ಕೆ ಪಡೆದು ಕಾನೂನು ಕ್ರಮವನ್ನು ಜರುಗಿಸಲಾಗಿದೆ.
ಡಿ ವೈ ಎಸ್ ಪಿ ಅರವಿಂದ್ ಕಲಗುಜ್ಜಿ ಹಾಗೂ ಇನ್ಸ್ಪೆಕ್ಟರ್ ಇಮ್ರಾನ್ ಬೇಗ್ ರವರ ನೇತೃತ್ವದ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಗೋ ಕಳ್ಳರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು