ಇತ್ತೀಚಿನ ಸುದ್ದಿ
Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ
02/12/2025, 11:58
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.reporterkarnataka@gmail.com
ಸ್ಕೂಟಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೋರ್ವರಿಗೆ ಗಾಯಗೊಂಡ ಘಟನೆ ತೀರ್ಥಹಳ್ಳಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ತೀರ್ಥಹಳ್ಳಿಯ ಸಾಗರ ರಸ್ತೆಯಲ್ಲಿರುವ ಸುಮುಖ ಕಾರ್ ಗ್ಯಾರೇಜ್
ಎದುರು ಅಪಘಾತ ಸಂಭವಿಸಿದೆ. ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುವ ಸಂದರ್ಭದಲ್ಲಿ ಈ ಅಪಘಾತ ನಡೆದಿದೆ. ಶಾಲಾ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ದೊಡ್ಡ ವಾಹನಗಳು ಅತ್ಯಂತ ವೇಗದಿಂದ ಚಲಾವಣೆ ಮಾಡುತ್ತಿರುವುದೇ ಇಂತಹ ಅಪಘಾತಕ್ಕೆ ಕಾರಣವಾಗಿದೆ. ಮಹಿಳೆಗೆ ಸಣ್ಣಪುಟ್ಟ ಪೆಟ್ಟಾಗಿದ್ದು ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.













