ಇತ್ತೀಚಿನ ಸುದ್ದಿ
Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ
04/08/2025, 16:13
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ
info.reporterkarnataka@gmail.com
ಮನೆಗಾಗಿ ಸಾಲ ಮಾಡಿಕೊಂಡಿದ್ದ ದಂಪತಿ ಮನೆಯಲ್ಲಿ ನಡೆದ ಸಣ್ಣ ಪುಟ್ಟ ಕಿರಿ ಕಿರಿಯಿಂದಾಗಿ ಮನನೊಂದು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತೀರ್ಥಹಳ್ಳಿ ತಾಲೂಕಿನ ಬಿಳುವೆ ಗ್ರಾಮದಲ್ಲಿ ನಡೆದಿದೆ.
ಬಿಳುವೆ ಗ್ರಾಮದ ಕಣಬೂರು ಸಮೀಪದ ಹಲ್ಯಾಪುರ ಎಂಬಲ್ಲಿ ದಂಪತಿ ಮನೆಯಿಂದ 200 ಮೀಟರ್ ದೂರದ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗುಂಡ ನಾಯ್ಕ್ (72 ) ಹಾಗೂ ಲಕ್ಷ್ಮಮ್ಮ (58 ) ಎಂದು ಗುರುತಿಸಲಾಗಿದೆ.


ಮನೆಗಾಗಿ ಸಾಲ ಮಾಡಿಕೊಂಡಿದ್ದರು. ಇದನ್ನು ಮನೆಯಲ್ಲಿ ಪ್ರೆಶ್ನೆ ಮಾಡಿದ್ದಾರೆ. ಇದರಿಂದ ಮನೆಯಲ್ಲಿ ಕಿರಿ ಕಿರಿ ಉಂಟಾಗಿದೆ. ಮನನೊಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














