4:57 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಶಿವಾಪೂರದಲ್ಲಿ ಅಡವಿಸಿದ್ದೇಶ್ವರ ಜಾತ್ರೆ ಆರಂಭ: ಎಲ್ಲೆಡೆ ಸಂಭ್ರಮ- ಸಡಗರ

06/09/2024, 13:50

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದ ಅಂಬಲಿ ಒಡೆಯ ಆರಾಧ್ಯ ದೇವರಾದ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭಗೊಂಡಿದೆ.

ಮಹೋತ್ಸವದಲ್ಲಿ ನೂತನ ಮೂರ್ತಿ ಹಾಗೂ ಪಲ್ಲಕ್ಕಿ ಉತ್ಸವ ಆಚರಣೆ ಮತ್ತು ಭವ್ಯವಾದ ಜಾತ್ರೆಯ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಬ್ಯಾನರುಗಳು ರಾರಾಜಿಸುತ್ತಿವೆ. ಇಂದು ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜಾತ್ರೆ ಜರುಗುತ್ತದೆ.ಕಾರ್ಯಕ್ರಮಕ್ಕೆ ಅನೇಕ ಮಹಾತ್ಮರು, ಶರಣರು ಶಾಸಕ ಸಚಿವರು ರಾಜಕೀಯ ಮುಖಂಡರು ಕಾರ್ಯಕರ್ತರು ಆಗಮಿಸುವರು ಕಾರಣ ಗ್ರಾಮದ ಸುತ್ತಮುತ್ತಲಿನ ಭಕ್ತಾದಿಗಳ ಆಗಮಿಸಬೇಕೆಂದು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು