ಇತ್ತೀಚಿನ ಸುದ್ದಿ
ಶಿವರಾತ್ರಿ ಬಳಿಕ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕ, ತ.ನಾ., ಕೇರಳದಲ್ಲಿ ಭಾರಿ ಮಳೆ ನಿರೀಕ್ಷೆ
27/02/2022, 22:28
ಬೆಂಗಳೂರು(reporterkarnataka.com): ಮಾರ್ಚ್ 1ರಂದು ಶಿವರಾತ್ರಿ ಹಬ್ಬ ಮುಗಿಯುತ್ತಿದ್ದಂತೆ ಈ ವರ್ಷದ ಮೊದಲ ವಾಯುಭಾರ ಕುಸಿತವು ಬಂಗಾಳಕೂಲ್ಲಿಯಲ್ಲಿ ಉಂಟಾಗುವ ಲಕ್ಷಣಗಳಿದ್ದು ಶ್ರೀಲಂಕಾ ಅಥವಾ ತಮಿಳುನಾಡು, ಕರ್ನಾಟಕ ಹಾಗೂ ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಾರ್ಚ್ 3ರಂದು ತಮಿಳುನಾಡಿನಾದ್ಯಂತ ಭಾರಿ ಮಳೆಯಾಗಲಿದ್ದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಸಹ ಇದರ ಪರಿಣಾಮವಾಗಿ ಮಳೆಯಾಗಲಿದೆ.
ಮಾರ್ಚ್ 7ರ ತನಕ ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮತ್ತು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.