10:08 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

Shocking | ಕನ್ನಡದ ಖ್ಯಾತ ಕಿರುತೆರೆ ನಟಿ ಸೌಜನ್ಯ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ

30/09/2021, 14:59

ಬೆಂಗಳೂರು (Reporterkarnataka.com)

ಕನ್ನಡದ ಖ್ಯಾತ ಕಿರುತೆರೆ ನಟಿ ಸೌಜನ್ಯ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿ ನಡೆದಿದೆ.

ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿಯಾಗಿದ್ದ ಸೌಜನ್ಯ ( 25 ) ಹಲವು ವರ್ಷಗಳಿಂದಲೂ ದೊಡ್ಡಬೆಲೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು. ಕನ್ನಡದ ಕಿರುತೆರೆಯಲ್ಲಿ ನಟಿಸುತ್ತಿದ್ದರು. ಅಲ್ಲದೇ ಕನ್ನಡದ ಚೌಕಟ್ಟು ಹಾಗೂ ಫಮ್‌ ಚಿತ್ರದಲ್ಲಿ ನಟಿಸಿದ್ದಾರೆ.

ಇಂದು ಬೆಳಗ್ಗೆ ತನ್ನ ಪಿಎಯ ಬಳಿಯಲ್ಲಿ ತಿಂಡಿಯನ್ನು ತರಲು ತಿಳಿಸಿದ್ದಾರೆ. ತಿಂಡಿಯನ್ನು ತೆಗೆದುಕೊಂಡು ವಾಪಾಸ್‌ ಬಂದ ವೇಳೆಯಲ್ಲಿ ನಟಿ ಸೌನಜ್ಯ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಡೆತ್‌ ನೋಟ್‌ ನಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೆರೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ತನ್ನ ಸಾವಿಗೆ ನಾನೇ ಕಾರಣ ಎಂದು ಬರೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕುಂಬಳಗೋಡು ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ಸೌಜನ್ಯ ಪೋಷಕರಿಗೂ ಮಾಹಿತಿಯನ್ನು ನೀಡಲಾಗಿದ್ದು, ಅವರು ಕುಶಾಲನಗರದಿಂದ ಬರುತ್ತಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು