6:55 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಶಾಕಿಂಗ್ ನ್ಯೂಸ್: ಸರಕಾರಿ ಶಾಲೆಯನ್ನೇ ಗೋದಾಮು ಮಾಡಿದ ವ್ಯಾಪಾರಿ!; ಶಿಕ್ಷಣ ಸಚಿವರೇ ಏನು ಮಾಡುತ್ತಿದ್ದೀರಿ?

06/02/2023, 10:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಸರಕಾರಿ ಶಾಲಾ ಕಟ್ಟಡಗಳು ಪೋಲಿ ಪೋಕರಿಗಳ ಅಡ್ಡಾ ಆಗಿರೋದನ್ನ ನೀವೆಲ್ಲಾ ನೋಡಿದ್ದಿರಿ, ಕೇಳಿದ್ದೀರಿ. ಆದರೆ ಇಲ್ಲೊಂದು ಶಾಲಾ ಕಟ್ಟಡವನ್ನೇ ವ್ಯಾಪಾರಿಯೊಬ್ಬರು ದವಸ ಧಾನ್ಯ ಇಟ್ಟುಕೊಳ್ಳುವ ಗೊಡೌನ ಮಾಡಿಕೊಂಡಿದ್ದಾರೆ.


ಅಥಣಿ ತಾಲೂಕಿನ ಪಾರ್ಥನಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಶಾಲಾ ಕಟ್ಟಡ ಹಳೆಯದಾದ ಕಾರಣ ವಿದ್ಯಾರ್ಥಿಗಳಿಗೆ ಬೇರೆ ಕಟ್ಟಡದಲ್ಲಿ ವಿದ್ಯಾಭ್ಯಾಸಕ್ಕೆ ಅನುವು ಮಾಡಿ ಕೊಟಡಲಾಗಿದೆ. ಆದರೆ ಹೋದೆಯಾ ಪಿಶಾಚಿ ಅಂದರೆ ಬಂದೆ ಗವಾಕ್ಷಿ ಎಂಬಂತೆ, ಅದೆ ಗ್ರಾಮದ ವ್ಯಾಪಾರಿಯೊಬ್ಬ ಕಾಳು, ಕಡಿ ಮಾರಾಟ ಮತ್ತು ಖರೀದಿ ಕೇಂದ್ರ ಮಾಡಿಕೊಂಡಿದ್ದಾರೆ. ಇದೆಲ್ಲ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕಿದ್ದರೂ ಅಧಿಕಾರಿಗಳು ಮಾತ್ರ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ.

ಈ ಕುರಿತು ಗ್ರಾಮಸ್ಥರಾದ ರಫೀಕ್ ಪಟೇಲ್ ಮಾಧ್ಯಮದವರೊಂದಿಗೆ ಮಾತನಾಡಿ ಹಲವು ಬಾರಿ ಶಾಲಾ ಕಟ್ಟಡದಲ್ಲಿರುವ ಗೊಡೌನ ತೆರವುಗೊಳಿಸುವಂತೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲಾ ಕೂಡಲೇ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು