4:55 AM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

12/05/2026, 21:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನಲ್ಲಿ ಬೈಕ್ ಸವಾರರ ನಿರ್ಲಕ್ಷ್ಯಕ್ಕೆ ಜನರು ಬೆಚ್ಚಿಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಗೌಡಳ್ಳಿ ಸಮೀಪದ ಬಿಳ್ಳೂರು ಬಳಿ ನಡೆದಿದೆ.


ಮಳೆಯಿಂದಾಗಿ ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸ್ಥಳೀಯರು ಅಪಾಯವಿದೆ ಎಂದು ಎಚ್ಚರಿಕೆ ನೀಡಿದರೂ, ಕೆಲ ಬೈಕ್ ಸವಾರರು ಜೀವದ ಹಂಗು ತೊರೆದು ಕಂಬದ ಪಕ್ಕದಲ್ಲೇ ಸಾಗಿದ್ದಾರೆ.
ಬೈಕ್ ಸವಾರರು ಕಂಬದ ಸಮೀಪ ಹಾದುಹೋಗುತ್ತಿದ್ದ ಕ್ಷಣದಲ್ಲೇ ವಿದ್ಯುತ್ ಕಂಬ ಭಾರೀ ಸದ್ದಿನೊಂದಿಗೆ ಸಿಡಿದಿದ್ದು, ದೃಶ್ಯ ಮತ್ತೊಬ್ಬ ಪ್ರಯಾಣಿಕರ ಮೊಬೈಲ್‌ನಲ್ಲಿ ಸೆರೆಗೊಂಡಿದೆ.
ವಿದ್ಯುತ್ ತಂತಿ ಬೈಕ್ ಮೇಲೆ ಬಿದ್ದಿದ್ದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೇ ಸವಾರರು ಪಾರಾಗಿದ್ದಾರೆ.
ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಮಳೆಗಾಲದಲ್ಲಿ ಇಂತಹ ಅಪಾಯಕಾರಿ ವಿದ್ಯುತ್ ಅವಘಡಗಳ ಬಳಿ ಸಾಹಸ ಪ್ರದರ್ಶನ ಮಾಡದೇ ಸುರಕ್ಷತೆ ಪಾಲಿಸುವಂತೆ ಎಚ್ಚರಿಕೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು