2:24 AM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳ ಕೊರತೆ: ಮಂಗಳೂರು ವಿವಿಯಲ್ಲಿ 4 ಪಿಜಿ ಕೋರ್ಸ್ ತಾತ್ಕಾಲಿಕ ಸ್ಥಗಿತ

05/11/2025, 21:07

ಮಂಗಳೂರು(reporterkarnataka.com): ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯಲ್ಲಿ ಈ ಬಾರಿ ನಾಲ್ಕು ಪಿಜಿ ವಿಭಾಗಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಸಂಖ್ಯಾಶಾಸ್ತ್ರ, ಎಚ್‌ಆರ್‌ಡಿ, ಎಂಸಿಜೆ (ಪತ್ರಿಕೋದ್ಯಮ),ಎಲೆಕ್ಟ್ರಾನಿಕ್ಸ್ ವಿಭಾಗಗಳಿಗೆ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದರಿಂದ ಈ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದರು.
ಎಂಸಿಜೆ ವಿಭಾಗಕ್ಕೆ ಕೇವಲ ಒಬ್ಬ ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದರು. ವಿಭಾಗವನ್ನು ನಡೆಸಲು ಕನಿಷ್ಠ ೧೦-೧೫ ವಿದ್ಯಾರ್ಥಿಗಳಾದರೂ ಬೇಕು. ಈ ಕುರಿತು ವಿದ್ಯಾರ್ಥಿಗೆ ಆಡಳಿತಾತ್ಮಕ ಸಮಜಾಯಿಷಿಕೆ ನೀಡಲಾಗಿದೆ ಎಂದು ತಿಳಿಸಿದರು.
ವಿವಿಗೆ ಪಂಚಾಯ್ತಿಯಿಂದ ಕಂದಾಯ ವಿಧಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಲಾಗುವ ಕಟ್ಟಡಗಳಿಗೆ ಮಾತ್ರ ಕಂದಾಯ ವಿಧಿಸಬಹುದೇ ಹೊರತು ಸೇವಾ ವಿಭಾಗಗಳಿಗೆ ವಿಧಿಸಬಾರದು. ಈ ಕುರಿತು ಸ್ಪೀಕರ್ ಅವರ ಬಳಿ ಮಾತುಕತೆ ನಡೆಸಲಾಗಿದೆ. ಸರಿಯಾಗಿ ಕಂದಾಯ ಲೆಕ್ಕಾಚಾರ ನಡೆದ ಬಳಿಕ ಮುಂದಿನ ಹಂತದಲ್ಲಿ ಅದನ್ನು ಕಟ್ಟಲು ಕ್ರಮ ಕೈಗೊಳ್ಳಲಾಗುವುದು ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು