2:03 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಶ್ರೀರಾಮುಲು ವಿರುದ್ಧ ಹೇಳಿಕೆ: ಜನಾರ್ದನ ರೆಡ್ಡಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ; ವಾಲ್ಮೀಕಿ ಮುಖಂಡರ ಎಚ್ಚರಿಕೆ

25/01/2025, 14:19

ಬಳ್ಳಾರಿ(reporterkarnataka.com): ಮಾಜಿ ಸಚಿವ ಶ್ರೀರಾಮುಲು ಅವರ ವಿರುದ್ಧ ಮಾತನಾಡುತ್ತಿರುವ ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ರಾಜ್ಯದಾದ್ಯಂತ ಚಳವಳಿ ರೂಪಿಸುವುದಾಗಿ ವಾಲ್ಮೀಕಿ ಸಮುದಾಯದ ಬಳ್ಳಾರಿ ಜಿಲ್ಲಾ ಮುಖಂಡರು ಎಚ್ಚರಿಕೆ ನೀಡಿದ್ದಾರೆ. 
ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮುದಾಯದ ಮುಖಂಡ ಜೋಳದ ರಾಶಿ ತಿಮ್ಮಪ್ಪ, ‘ಜನಾರ್ದನ ರೆಡ್ಡಿ ಅವರು ಶ್ರೀರಾಮುಲು ವಿರುದ್ಧ ‘ನೀನು ಕೀಳು ಜಾತಿಯವನು, ಕೊಡಲಿ ಹಿಡಿದುಕೊಂಡು ಬೀದಿಯಲ್ಲಿ ಓಡಾಡುತ್ತಿದ್ದವನು, ನಿನ್ನ ರಾಜಕೀಯ ಜೀವನ ರೂಪಿಸಿದ್ದು ನಾನು’ ಎಂದೆಲ್ಲ ಮಾತನಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು. ಜನಾರ್ದನ ರೆಡ್ಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಜಾತಿ ನಿಂದನೆ ಪ್ರಕರಣ ದಾಖಲು ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯದ ಎಲ್ಲ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿಗಳಿಗೆ ದೂರು ಕೊಡಲಾಗುವುದು’ ಎಂದರು. 
ಅದು ಸಫಲವಾಗದಿದ್ದರೆ ರಾಜ್ಯದಾದ್ಯಂತ ಚಳವಳಿ ರೂಪಿಸುತ್ತೇವೆ. ಅಭಿಯಾನ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.  
ಜನಾರ್ದನ ರೆಡ್ಡಿ ಕ್ಷಮೆ ಕೇಳಬೇಕು, ಬಿಜೆಪಿಯಿಂದ ಅವರನ್ನು ಹೊರ ಹಾಕಬೇಕು. ಶ್ರೀರಾಮುಲು ಅವರಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೇ ಬೆಂಬಲ ಸೂಚಿಸಿದ್ದಾರೆ. ಶ್ರೀರಾಮುಲು ಮನಸ್ಥಿತಿ ಏನು, ರೆಡ್ಡಿ ಮನಸ್ಥಿತಿ ಏನು ಎಂಬುದು ಪಕ್ಷಕ್ಕೂ ಗೊತ್ತಾಗಿದೆ.  ನಾವು ರಾಮುಲು ಪರವಾಗಿ ಇರುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು