4:01 AM Thursday20 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಶ್ರೀ ಶಾಂಕರ ತತ್ವಪ್ರಸಾರ ಅಭಿಯಾನ: ಸಾಮರಸ್ಯ ಸಮಾಜ ಜಾಗೃತಿ ಕಾರ್ಯಕ್ರಮ

18/05/2024, 23:00

ಬಂಟ್ವಾಳ(reporterkarnataka.com):ಶಂಕರಾಚಾರ್ಯರ ಅದ್ವೈತ ಸಿದ್ಧಾಂತದಂತೆ ಎಲ್ಲರಲ್ಲೂ ಪರಮಾತ್ಮನನ್ನು ಕಾಣಬೇಕು. ಎಲ್ಲರೂ ದೇವರ ಅಂಶಗಳೇ ಆಗಿದ್ದಾರೆ ಎಂದು ಸಾರಿದ ಶಂಕರಾಚಾರ್ಯರು ಧರ್ಮ ರಕ್ಷಣೆಗೆ ಹೊಸ ಮಾರ್ಗವನ್ನು ಹಾಕಿಕೊಟ್ಟು ಎಲ್ಲಾ ರೀತಿಯ ಭೇದಭಾವ ಅಳಿಸಿ ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಹರಿಕಾರರಾಗಿದ್ದಾರೆ‌ ಎಂದು ಧಾರ್ಮಿಕ ಪರಿಷತ್ತು ಜಿಲ್ಲಾ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ ಅಭಿಪ್ರಾಯ ಪಟ್ಟರು.
ಅವರು ಬಿ.ಸಿ.ರೋಡಿನ ಅನ್ನಪೂರ್ಣೇಶ್ವರೀ ದೇವಸ್ಥಾನ ದ ವಠಾರದಲ್ಲಿ ಸನಾತನ ಹಿಂದೂ ಧರ್ಮದ ಪುನರುತ್ಥಾನದ ಮಹಾಶಕ್ತಿಯಾಗಿ ಅವತರಿಸಿದ ಆಚಾರ್ಯ ಶಂಕರ ಭಗವತ್ಪಾದರ ಜಯಂತ್ಯುತ್ಸವದ ಅಂಗವಾಗಿ ಬಂಟ್ವಾಳ ತಾಲೂಕಿನ ಹಲವೆಡೆಗಳಲ್ಲಿ ಶ್ರೀ ಶಂಕರ ತತ್ವಪ್ರಸಾರ ಅಭಿಯಾನ ಶೃಂಗೇರಿ ಮಠ, ಅಖಿಲ ಕರ್ನಾಟ ಹಿರಿಯರ ಸೇವಾ ಪ್ರತಿಷ್ಠಾನ, ಶ್ರೀ ಶಂಕರ ಸೇವಾ ಪ್ರತಿಷ್ಠಾನ ಕೋಟೆಕಾರು ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾದ ಶ್ರೀ ಶಾಂಕರ ತತ್ವಪ್ರಸಾರ ಅಭಿಯಾನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು.
ಅನ್ನಪೂರ್ಣೇಶ್ವರಿ ದೇವಸ್ಥಾನ ದ ಆಡಳಿತ ಮಂಡಳಿ‌ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ರೊಟೇರಿಯನ್ ಪ್ರಕಾಶ ಕಾರಂತ, ಶ್ರೀಶಂಕರ ಸೇವಾ ಪ್ರತಿಷ್ಠಾನ ಬಂಟ್ವಾಳ ತಾಲೂಕು ಸಂಚಾಲಕ ಎ.ಕೃಷ್ಣ ಶರ್ಮ, ಪದಾಧಿಕಾರಿಗಳಾದ ಶಿವರಾಮ ರಾವ್ ಬೈರಿಕಟ್ಟೆ, ಜಗದೀಶ ಹೊಳ್ಳ ಬಿ.ಸಿ.ರೋಡು ಉಪಸ್ಥಿತರಿದ್ದರು.
ಉಪಾಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿ, ಪ್ರಸ್ತಾವನೆ ಗೈದರು. ಪ್ರಧಾನ ಕಾರ್ಯದರ್ಶಿ ರಾಜಾರಾಮ ಐತಾಳ್ ಕಂದೂರು ವಂದಿಸಿದರು.
ಮೇ 23ರಿಂದ ಜೂನ್ 2ರವರೆಗೆ ಸಮಾಜ ಜಾಗೃತಿ ಕಾರ್ಯಕ್ರಮ, ಧಾರ್ಮಿಕ ಸಭೆ, ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಮೇ 23ಕ್ಕೆ ಮಂಗಳಪದವು ಅಯ್ಯಪ್ಪ ಭಜನಾ ಮಂದಿರ, ಮೇ 24 ಸೇವಾಂಜಲಿ ಪ್ರತಿಷ್ಠಾನ ಪರಂಗಿಪೇಟೆ, ಮೇ 25 ವೆಂಕಟರಮಣ ಭಜನಾ ಮಂದಿರ ಕಡಂಬು ವಿಟ್ಲ, ಮೇ 26 ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಕಣಿಯೂರು ಕನ್ಯಾನ, ಜೂನ್1 ಅಶ್ವತ್ಥನಾರಾಯಣ ಭಜನಾ ಮಂದಿರ ಬೈರಿಕಟ್ಟೆ ಅಳಿಕೆ, ಜೂನ್2 ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಂಟ್ವಾಳದಲ್ಲಿ ಸಂಪನ್ನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು