10:29 PM Saturday7 - March 2026
ಬ್ರೇಕಿಂಗ್ ನ್ಯೂಸ್
ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಶ್ರೀರಾಮ ಪ್ರೌಢಶಾಲೆ 9ನೇ ತರಗತಿ ವಿದ್ಯಾರ್ಥಿನಿ ಕಾವ್ಯಳ ಚಿಕಿತ್ಸೆಗೆ 2 ಲಕ್ಷ ರೂ. ನೆರವು: ಡಾ. ಪ್ರಭಾಕರ ಭಟ್ ಚೆಕ್ ಹಸ್ತಾಂತರ

21/12/2023, 13:31

ಬಂಟ್ವಾಳ(reporterjarnataka.com):ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ 9ನೇ ತರಗತಿಯಲ್ಲಿ ಓದುತ್ತಿರುವ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ನಳಿನಿ ಅವರ ಪುತ್ರಿ ಕಾವ್ಯ ಎಂಬ ಬಾಲಕಿ ಎಸ್‌ಎಲ್‌ಇ ಎಂಬ ಮಾರಕ ಕಾಯಿಲೆಯಿಂದ ಬಳಲುತ್ತಿದ್ದು ಅವಳಿಗೆ ಚಿಕಿತ್ಸಾ ವೆಚ್ಚವಾಗಿ
ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಂದ ಸಂಗ್ರಹವಾದ 2 ಲಕ್ಷ ರೂ. ಚೆಕ್ಕನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ
ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಅವರು ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ, ಡಾ.ಕೊಂಕೋಡಿ ಕೃಷ್ಣ ಭಟ್ , ಕೋಶಾಧಿಕಾರಿ ಅಚ್ಯುತ ನಾಯಕ್, ವಿವೇಕಾನಂದ ಕನ್ನಡ ಮಾಧ್ಯಮದ ಆಡಳಿತ ಮಂಡಳಿ ಸದಸ್ಯರಾಗಿರುವ ಸುಬ್ರಹ್ಮಣ್ಯ
ಭಟ್ ಕೆದಿಲ, ಡಾ.ಕಮಲಾ ಪ್ರಭಾಕರ ಭಟ್, ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ, ಸಹ ಸಂಚಾಲಕರಾದ ರಮೇಶ ಎನ್, ಪ್ರೌಢಶಾಲಾ ಶಿಕ್ಷಣ ಪರಿವೀಕ್ಷಕರಾದ ಲಕ್ಷ್ಮಿ ರಘುರಾಜ್, ಸುಧಾ ಸೂರ್ಯನಾರಾಯಣ ಭಟ್, ಮುಖ್ಯೋಪಾಧ್ಯಾಯರು ಗೋಪಾಲ ಎಂ. ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು