5:23 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ಶ್ರೀಕಾಂತ್ ಪೂಜಾರಿಯನ್ನು ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

05/01/2024, 22:37

ಬೆಂಗಳೂರು(reporterkarnataka.com):
ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ 16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು ಈತನ ಎಲ್ಲಾ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ ಎಂದು ಅವರು ಎಕ್ಸ್(ಟ್ವಿಟರ್)ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.
ಕಳೆದ 2023ನೇ ಸಾಲಿನಲ್ಲಿ ಹುಬ್ಬಳ್ಳಿ – ಧಾರವಾಡ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ದೊಂಬಿ ಮುಂತಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಲ್.ಪಿ.ಸಿ ( ಕಾನೂನು ವಿಚಾರಣಾ ಪ್ರಮಾಣಪತ್ರ ) ಪ್ರಕರಣಗಳಲ್ಲಿ ಒಟ್ಟು 36 ಜನರನ್ನು ದಸ್ತಗಿರಿ ಮಾಡಲಾಗಿದೆ. ಇದರಲ್ಲಿ ಶ್ರೀಕಾಂತ ಪೂಜಾರಿ 32ನೆಯ ವ್ಯಕ್ತಿ. ಈತನನ್ನು ಕರಸೇವಕನೆಂಬ ಕಾರಣಕ್ಕೆ ಹೊರಗಡೆ ಬಿಡಬೇಕೋ? ಅಥವಾ ಆರೋಪಿ ಎಂಬ ಕಾರಣಕ್ಕೆ ಬಂಧಿಸಬೇಕೋ? ಬಿಜೆಪಿಯವರು ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ ಎಂದು ಮುಖ್ಯಮಂತ್ರಿ ತಿರುಗೇಟು ನೀಡಿದ್ದಾರೆ.
ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿಕೊಂಡು ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ?
ರಾಮಮಂದಿರದ ಉದ್ಘಾಟನೆ ವೇಳೆ ಶ್ರೀಕಾಂತ ಪೂಜಾರಿಯ ಬಂಧನವಾಗಿರುವುದು ಕಾಕತಾಳೀಯ ಅಷ್ಟೆ. ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು ಇತರೆ 36 ಜನರ ಜೊತೆಗೆ ಇವರನ್ನು ಕೂಡ ಬಂಧಿಸಿದ್ದಾರೆ. ಇದರಲ್ಲಿ ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ. ಕಾನೂನು ಪಾಲನೆ ಮಾಡಬೇಕು, ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು