10:58 PM Friday2 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಶ್ರೀರಾಮ ನಮ್ಮ ಅಸ್ಮಿತೆ, ಆರೋಪಿಗಳ ಪರ ಯಾರೂ ನಿಲ್ಲುವಂತಿಲ್ಲ: ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ; ಫೈಜಾಬಾದ್ ಬಾರ್ ಕೌನ್ಸಿಲ್ ಖಡಕ್ ಆದೇಶ

29/06/2026, 17:22

ಅಯೋಧ್ಯೆ(reporterkarnataka.com): ಹಿಂದೂಗಳ ಅಸ್ಮಿತೆ ಎಂದೇ ಕರೆಯಲಾಗುವ ಅಯೋಧ್ಯಾ ರಾಮ ಮಂದಿರದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಸುದ್ದಿ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಮಾರು ಎಂಟು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ಮುಂದುವರಿಸಿದ್ದಾರೆ. ಈಗ ಈ ಬಂಧಿತರಾಗಿರುವ ಆರೋಪಿಗಳ ಪರವಾಗಿ ವಕಾಲತ್​ನ್ನು ನಡೆಸದಂತೆ ಅಯೋಧ್ಯಾ ಬಾರ್​ ಕೌಂನ್ಸಿಲ್​ ನಿರ್ಧಾರ ಕೈಗೊಂಡಿದ್ದು, ಈ ನಿರ್ಧಾರವನ್ನು ವಿರೋಧಿಸುವ ವಕೀಲರಿಗೆ 5 ಲಕ್ಷ ದಂಡವನ್ನು ವಿಧಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.
ಸೋಮವಾರ (ಜೂ.29) ಅಯೋಧ್ಯಾ ರಾಮ ಮಂದಿರದ ಬಗ್ಗೆ ಕೇಳಿ ಬಂದಿರುವ ಆರೋಪಗಳು ನಮ್ಮ ಅರಿವಿಗೆ ಬಂದಿದೆ. ಆದರೆ ಆರೋಪಿಗಳೆಂದು ಬಂಧಿಸಲಾಗಿರುವವರ ಪರವಾಗಿ ಅಯೋಧ್ಯಾ ಹಾಗೂ ಫೈಜಾಬಾದ್​ ಜಿಲ್ಲೆಯ ಯಾವುದೇ ವಕೀಲರು ವಕಾಲತ್​ ನಾಮವನ್ನು ಸಲ್ಲಿಸುವಂತಿಲ್ಲ. ಅಂತೆಯೇ ಅವರ ಪರವಾಗಿ ವಾದ ಮಂಡಿಸುವಂತಿಲ್ಲ ಎಂದು ಬಾರ್​ ಅಸೋಸಿಯೇಶನ್​ ಆದೇಶಿಸಿದೆ. ಈ ಆದೇಶವನ್ನು ಧಿಕ್ಕರಿಸುವ ವಕೀಲನಿಗೆ 5 ಲಕ್ಷ ದಂಡವನ್ನು ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ನಾವು ದೇವಸ್ಥಾನದ ಪರವಿದ್ದೆವೆ
ಅಯೋಧ್ಯಾ ರಾಮ ಮಂದಿರಕ್ಕೆ ಹರಿದು ಬಂದಿರುವ ದೇಣಿಗೆಯಲ್ಲಿ ಅಕ್ರಮ ನಡೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಕುರಿತು ಈಗಾಗಲೇ ಹಲವರು ಬಂಧನಕ್ಕೆ ಒಳಗಾಗಿದ್ದಾರೆ. ಪ್ರಭು ಶ್ರೀರಾಮನ ಮಂದಿರ ನಮ್ಮೆಲ್ಲರ ಅಸ್ಮಿತೆ. ನಮ್ಮ ಅಸ್ಮಿತೆಗೆ ತೊಂದರೆ ಉಂಟಾದರೆ ನಾವು ಸುಮ್ಮನಿರುವುದಿಲ್ಲ. ನಾವು ಕೇವಲ ದೇವಸ್ಥಾನ ಪರವಾಗಿ ಮಾತ್ರ ನಿಲ್ಲುತ್ತೆವೆ, ನ್ಯಾಯಾಲಯದಲ್ಲಿ ಹೋರಾಡುತ್ತೆವೆಂದು ಬಾರ್​ ಕೌಂನ್ಸಿಲ್​ನಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.
ಅಯೋಧ್ಯೆಯ ಶ್ರೀರಾಮನ ಮಂದಿರದ ದೇಣಿಗೆಯಲ್ಲಿ ಭಾರಿ ಅಕ್ರಮ ನಡೆದಿದೆ ಈ ಕುರಿತು ತುರ್ತು ವಿಚಾರಣೆ ನಡೆಯಬೇಕೆಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್​ ಸೋಮವಾರ (ಜೂ.29) ವಜಾ ಮಾಡಿದೆ. ಈಗ ನ್ಯಾಯಾಲಯ ರಜಾಪೀಠದಲ್ಲಿದೆ. ಇದನ್ನು ಬೇಸಿಗೆ ರಜೆ ಮುಗಿದ ನಂತರ ಪಟ್ಟಿ ಮಾಡಲಾಗುವುದು, ಮೊದಲು ಪೊಲೀಸ್​ ತನಿಖೆ ಆಗಲಿ, ಇಷ್ಟು ಆತುರದ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಎಂ. ಎಂ. ಸುಂದರೇಶ್ ಮತ್ತು ಶೀಲ್ ನಾಗು ಅವರ ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು