2:38 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಬೈಲಾ ಗಾಳಿಗೆ ತೂರಿ ಡಿಸಿಸಿ ಬ್ಯಾಂಕ್‌ ನಿಂದ ಸಹಕಾರ ಸಂಘಗಳಿಗೆ ಸಾಲ ವಿತರಣೆ ಆರೋಪ

11/08/2022, 20:41

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಬೈಲಾ ಗಾಳಿಗೆ ತೂರಿ ಡಿಸಿಸಿ ಬ್ಯಾಂಕ್‌ ವತಿಯಿಂದ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರ ನೇತೃತ್ವದಲ್ಲಿ ಸಹಕಾರ ಸಂಘಗಳಿಗೆ ಸಾಲ ವಿತರಣೆ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಹಾಗೂ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಜಿ.ಕೆ.ವೆಂಕಟಶಿವಾ ರೆಡ್ಡಿ ಆಪಾದಿಸಿದ್ದಾರೆ.

ಶ್ರೀನಿವಾಸಪುರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಆ .೧೦ ರಂದು ಶ್ರೀನಿವಾಸಪುರದ ಮಾವಿನ ಕಾಯಿ ಮಂಡಿಯೊಂದರಲ್ಲಿ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ ತಾಲ್ಲೂಕಿನ ಯಲ್ಲೂರು , ಮಣಿಗಾನಹಳ್ಳಿ , ದಳಸನೂರು ಹಾಗೂ ಅಡ್ಡಗಲ್ ಸಹಕಾರ ಸಂಘಗಳ ವ್ಯಾಪ್ತಿಗೆ ಬರುವ ೩೭೬ ಸ್ತ್ರೀ ಶಕ್ತಿ ಸಂಘಗಳಿಗೆ ರೂ . ೧೮.೫೪ ಕೋಟಿ ಸಾಲ ವಿತರಣೆ ಮಾಡಲಾಗಿದೆ. ಸಂಘಗಳ ಕಾರ್ಯದರ್ಶಿಗಳ ಮೇಲೆ ಒತ್ತಡ ಹೇರಿ ಸದಸ್ಯರನ್ನು ಸಭೆಗೆ ಕರೆಸಿಕೊಳ್ಳಲಾಗಿದೆ ಹಾಗೂ ಸಾಲ ವಿತಣಾ ಸಮಾರಂಭಕ್ಕೆ ಸುಮಾರು ರೂ .೩.೫೦ ಲಕ್ಷ ವೆಚ್ಚ ಮಾಡಲಾಗಿದೆ ಎಂದು ಹೇಳಿದರು. 

ನಬಾರ್ಡ್ ಹಾಗೂ ಅಪೆಕ್ಸ್ ಬ್ಯಾಂಕ್‌ ನೀಡುವ ಹಣದಿಂದ ಡಿಸಿಸಿ ಬ್ಯಾಂಕ್ ಬಡ್ಡಿರಹಿತ ಸಾಲ ನೀಡುತ್ತಿದೆ. ಆದರೆ ತಾಲ್ಲೂಕಿನ ಶಾಸಕರು ಸ್ವಂತ ಹಣ ನೀಡಿದಂತೆ ಬಿಂಬಿಸಿಕೊಳ್ಳುತ್ತಿದ್ದಾರೆ . ಹಾಗೇನಾದರೂ ಕೊಡುವುದಾದರೆ, ಅವರೇ ಹೇಳಿರುವಂತೆ ಮೂರು ನಾಲ್ಕು ತಲೆಮಾರಿಗೆ ಸಾಕಾಗುಷ್ಟು ಮಾಡಲಾಗಿರುವ ಸಂಪಾದನೆಯಲ್ಲಿ ನೀಡಲಿ ಎಂದು ಕುಟುಕಿದರು.

ಸ್ತ್ರೀ ಶಕ್ತಿ ಸಂಘಗಳ ಬಗ್ಗೆ ನನಗೆ ಗೌರವವಿದೆ . ಸಂಘಗಳಿಗೆ ಸಾಲ ನೀಡುವ ಬಗ್ಗೆ ಯಾವುದೇ ಆಕ್ಷೇಪ ಇಲ್ಲ . ಮಹಿಳೆಯರ ಸಬಲೀಕರಣ ಆಗಲೇಕು . ಆದರೆ ಅವರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುವುದನ್ನು ವಿರೋಧಿಸುತ್ತೇನೆ ಎಂದು ಹೇಳಿದರು . ಕಸಬಾ ಬ್ಯಾಂಕ್ ಶಾಖೆ ಸೇರಿದಂತೆ ತಾಲ್ಲೂಕಿನ ಕೆಲವು ಬ್ಯಾಂಕ್‌ಗಳಲ್ಲಿ ಕೆಲವು ಪ್ರಭಾವಿಗಳು ಪಡೆದುಕೊಂಡಿರುವ ಸಾಲ ಮರುಪಾವತಿಯಾಗಿಲ್ಲ . ಸ್ತ್ರೀ ಶಕ್ತಿ ಸಂಘಗಳಿಂದ ಸಂಗ್ರಹಿಸಲಾಗಿರುವ ಶೇರು ಹಣಕ್ಕೆ ಲೆಕ್ಕವಿಲ್ಲ . ಈ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸಿದರು . ಕೆ.ಆರ್.ರಮೇಶ್ ಕುಮಾರ್ ಅವರು ನೀಡಿರುವ ಆಶ್ವಾಸನೆಗಳು ಆಶ್ವಾಸನೆಗಳಾಗಿಯೇ ಉಳಿದಿವೆ . ಸಮಯ ಇದ್ದಾಗ ಸುಮ್ಮನಿದ್ದ ಅವರು , ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಾರಾಟ ಮಾಡುತ್ತಿದ್ದಾರೆ . ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್.ಡಿ.ಕುಮಾರಸ್ವಾಮಿ ಎಂದು ಹೇಳಿದರು .ಅವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ . ಅವರು ಬಾಯಿಬಿಟ್ಟರೆ ಶಾಸಕರ ಬಣ್ಣ ಬಯಲಾಗುತ್ತದೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್‌.ನಾರಾಯಣಸ್ವಾಮಿ , ಪುರಸಭಾ ಸದಸ್ಯ ಬಿ.ವೆಂಕಟರೆಡ್ಡಿ , ಮುಖಂಡರಾದ ಪೂಲ ಶಿವಾರೆಡ್ಡಿ , ಏಜಾಜ್ ಪಾಷ , ಸುಬ್ಬರೆಡ್ಡಿ , ನಾರಾಯಣಸ್ವಾಮಿ , ಏನಾಜ್ ಖಾನ್ , ಮನು ಮತ್ತಿತರರು ಇದ್ದರು 

ಇತ್ತೀಚಿನ ಸುದ್ದಿ

ಜಾಹೀರಾತು