10:57 AM Monday10 - November 2025
ಬ್ರೇಕಿಂಗ್ ನ್ಯೂಸ್
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಆಮ್ ಆದ್ಮಿ ಪಾರ್ಟಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

24/09/2022, 23:53

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಜನರು ಆರೋಗ್ಯ ತಪಾಸಣೆಗೆ ಒಳಗಾಗುವುದರ ಮೂಲಕ ಸಂಭವನೀಯ ಅನಾರೋಗ್ಯದಿಂದ ಮುಕ್ತರಾಗಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಎಎಪಿ ಮುಖಂಡ ಡಾ . ವೈ.ವಿ.ವೆಂಕಟಾಚಲ ಹೇಳಿದರು. 

ಪಟ್ಟಣದ ಸಂತೆ ಮೈದಾನದಲ್ಲಿ ಶನಿವಾರ ತಾಲ್ಲೂಕು ಎಎಪಿ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು , ಆರ್ಥಿಕ ಸಮಸ್ಯೆ ಹಾಗೂ ನಿರ್ಲಕ್ಷ್ಯದ ಪರಿಣಾಮವಾಗಿ ಗ್ರಾಮೀಣ ಪ್ರದೇಶದ ಬಡವರ ಆರೋಗ್ಯ ಹದಗೆಡುತ್ತಿದೆ ಎಂದು ಅಭಿಪ್ರಾಯಪಟ್ಟರು.

ಗ್ರಾಮೀಣರು ಕೃಷಿ ಚಟುವಟಿಕೆ ಒತ್ತಡದಲ್ಲಿ ವೈಯಕ್ತಿಕ ಆರೋಗ್ಯದ ಕಡೆ ಅಗತ್ಯ ಗಮನ ನೀಡಲು ಸಾಧ್ಯವಾಗುತ್ತಿಲ್ಲ. ಕೆಲವರು ವಾರದ ಸಂತೆಗೆ ಕಡ್ಡಾಯವಾಗಿ ಖರೀದಿಗೆ ಬರುತ್ತಾರೆ. ಅವರ ಹಿತದೃಷ್ಟಿಯಿಂದ ತಾಲ್ಲೂಕಿನ ಪ್ರತಿ ಸಂತೆಯಲ್ಲೂ ಎಎಪಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ.

ಪ್ರತಿ ಸಂತೆಯಲ್ಲೂ ನೂರಾರು ಜನರು ಶಿಬಿರದ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಶಿಬಿರದಲ್ಲಿ ಆರೋಗ್ಯ ಸಿಬ್ಬಂದಿ ವಿವಿಧ ಪರೀಕ್ಷೆಗಳನ್ನು ನಡೆಸಿ , ಆಯಾ ವ್ಯಕ್ತಿಯ ಆರೋಗ್ಯದ ಬಗ್ಗೆ ತಿಳಿಸುತ್ತಾರೆ.

ತಜ್ಞ ವೈದ್ಯರು ಪರೀಕ್ಷಿಸಿ ಆರೋಗ್ಯ ಸಲಹೆ ನೀಡುತ್ತಾರೆ, ಅದರಂತೆ ನಡೆದುಕೊಂಡರೆ ಅವರ ಆರೋಗ್ಯ ಸುಧಾರಿಸುತ್ತದೆ. ಇದು ಎಎಪಿ ಉಚಿತ ಸೇವೆಯಾಗಿರುತ್ತದೆ ಎಂದು ಹೇಳಿದರು. 

ಶಿಬಿರದಲ್ಲಿ ವೆಂಕಟೇಶ್ವರ ನರ್ಸಿಂಗ್ ಹೋಂ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರು ೩೦೦ ಕ್ಕೂ ಹೆಚ್ಚು ವ್ಯಕ್ತಿಗಳ ಆರೋಗ್ಯ ತಪಾಸಣೆ ನಡೆಸಿ , ಅಗತ್ಯ ವೈದ್ಯಕೀಯ ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು