3:01 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಆಮ್ ಆದ್ಮಿ ಪಾರ್ಟಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

24/09/2022, 23:53

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಜನರು ಆರೋಗ್ಯ ತಪಾಸಣೆಗೆ ಒಳಗಾಗುವುದರ ಮೂಲಕ ಸಂಭವನೀಯ ಅನಾರೋಗ್ಯದಿಂದ ಮುಕ್ತರಾಗಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಎಎಪಿ ಮುಖಂಡ ಡಾ . ವೈ.ವಿ.ವೆಂಕಟಾಚಲ ಹೇಳಿದರು. 

ಪಟ್ಟಣದ ಸಂತೆ ಮೈದಾನದಲ್ಲಿ ಶನಿವಾರ ತಾಲ್ಲೂಕು ಎಎಪಿ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು , ಆರ್ಥಿಕ ಸಮಸ್ಯೆ ಹಾಗೂ ನಿರ್ಲಕ್ಷ್ಯದ ಪರಿಣಾಮವಾಗಿ ಗ್ರಾಮೀಣ ಪ್ರದೇಶದ ಬಡವರ ಆರೋಗ್ಯ ಹದಗೆಡುತ್ತಿದೆ ಎಂದು ಅಭಿಪ್ರಾಯಪಟ್ಟರು.

ಗ್ರಾಮೀಣರು ಕೃಷಿ ಚಟುವಟಿಕೆ ಒತ್ತಡದಲ್ಲಿ ವೈಯಕ್ತಿಕ ಆರೋಗ್ಯದ ಕಡೆ ಅಗತ್ಯ ಗಮನ ನೀಡಲು ಸಾಧ್ಯವಾಗುತ್ತಿಲ್ಲ. ಕೆಲವರು ವಾರದ ಸಂತೆಗೆ ಕಡ್ಡಾಯವಾಗಿ ಖರೀದಿಗೆ ಬರುತ್ತಾರೆ. ಅವರ ಹಿತದೃಷ್ಟಿಯಿಂದ ತಾಲ್ಲೂಕಿನ ಪ್ರತಿ ಸಂತೆಯಲ್ಲೂ ಎಎಪಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ.

ಪ್ರತಿ ಸಂತೆಯಲ್ಲೂ ನೂರಾರು ಜನರು ಶಿಬಿರದ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಶಿಬಿರದಲ್ಲಿ ಆರೋಗ್ಯ ಸಿಬ್ಬಂದಿ ವಿವಿಧ ಪರೀಕ್ಷೆಗಳನ್ನು ನಡೆಸಿ , ಆಯಾ ವ್ಯಕ್ತಿಯ ಆರೋಗ್ಯದ ಬಗ್ಗೆ ತಿಳಿಸುತ್ತಾರೆ.

ತಜ್ಞ ವೈದ್ಯರು ಪರೀಕ್ಷಿಸಿ ಆರೋಗ್ಯ ಸಲಹೆ ನೀಡುತ್ತಾರೆ, ಅದರಂತೆ ನಡೆದುಕೊಂಡರೆ ಅವರ ಆರೋಗ್ಯ ಸುಧಾರಿಸುತ್ತದೆ. ಇದು ಎಎಪಿ ಉಚಿತ ಸೇವೆಯಾಗಿರುತ್ತದೆ ಎಂದು ಹೇಳಿದರು. 

ಶಿಬಿರದಲ್ಲಿ ವೆಂಕಟೇಶ್ವರ ನರ್ಸಿಂಗ್ ಹೋಂ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರು ೩೦೦ ಕ್ಕೂ ಹೆಚ್ಚು ವ್ಯಕ್ತಿಗಳ ಆರೋಗ್ಯ ತಪಾಸಣೆ ನಡೆಸಿ , ಅಗತ್ಯ ವೈದ್ಯಕೀಯ ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು