6:19 PM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಮಾವಿನಲ್ಲಿ ಸಮಗ್ರ ಬೆಳೆ ನಿರ್ವಹಣೆ; ಹೊರಾಂಗಣಾ ತರಬೇತಿ ಕಾರ್ಯಕ್ರಮ 

24/08/2022, 20:15

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರೋಗನಿರೋಧಕ ಶಕ್ತಿಯೊಂದಿಗೆ ಬೆಳೆಯು ಆರೋಗ್ಯಕರವಾಗಿ ಬೆಳೆದು ಅಧಿಕ ಇಳುವರಿ ನೀಡಬೇಕಾದರೆ ಬೆಳೆಗಳಿಗೆ ಸಕಾಲದಲ್ಲಿ ಸವರುವಿಕೆ ಮತ್ತು ಸಮತೋಲನ ಪೋಷಕಾಂಶಗಳನ್ನು ಒದಗಿಸುವುದು ಅವಶ್ಯ . ಆದರೆ ಕೆಲವೇ ರೈತರು ಲಘು ಪೋಷಕಾಂಶಗಳ ಮಹತ್ವವನ್ನರಿತು ಬಳಸುತ್ತಿದ್ದಾರೆ.

ಆದ್ದರಿಂದ ಗುಣಮಟ್ಟದ ಬೆಳೆ ಹಾಗೂ ಹೆಚ್ಚಿನ ಇಳುವರಿಗಾಗಿ ಸವರುವಿಕೆ ಮಾಡುವುದು ಅವಶ್ಯವಾಗಿದೆ ಮತ್ತು ಸಮಗ್ರ ಪೋಷಕಾಂಶಗಳ ನಿರ್ವಹಣೆಯ ಅಂಗವಾಗಿ ಮಾವು ಬೆಳೆಯ ಎಲೆಗಳಿಗೆ ಸಿಂಪಡಿಸಬಹುದಾದ ಮಾವು ಸ್ಪೆಷಲ್ ಅತ್ಯಂತ ಉಪಯುಕ್ತವಾಗಿದೆ . ಈ ನಿಟ್ಟಿನಲ್ಲಿ ವಿಸ್ತರಣ ಶಿಕ್ಷಣ ಘಟಕ ( ಕೋಲಾರ ) , ಕೃಷಿ ವಿಜ್ಞಾನ ಕೇಂದ್ರ ಚಿಂತಾಮಣಿ ರವರ ವತಿಯಿಂದ ಮಾವಿನಲ್ಲಿ ಸಮಗ್ರ ಬೆಳೆ ನಿರ್ವಹಣೆ ಕುರಿತು ಹೊರಾಂಗಣಾ ತರಬೇತಿ ಕಾರ್ಯಕ್ರಮವನ್ನು ಶ್ರೀನಿವಾಸಪುರ ತಾಲೂಕಿನ ಬೂರುಗಾನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು ತೋಟಗಾರಿಕೆ ವಿಜ್ಞಾನಿಗಳಾದ ಸಿಂಧು ಕೆ. ಅವರು ಮಾವಿನಲ್ಲಿ ವೈಜ್ಞಾನಿಕ ಬೇಸಾಯ ಕ್ರಮಗಳು . ಮಾವಿನ ಮರ ಸವರುವಿಕೆ ಹಾಗೂ ಲಘುಪೋಷಕಾಂಶಗಳ ಮಿಶ್ರಣವಾದ ಮಾವು ಸ್ಪೆಷಲ್ ಕುರಿತು ಮಾಹಿತಿ ನೀಡಿದರು . ಡಾ.ದೀಲಿಪ್.ಎಸ್ .ವಿಜ್ಞಾನಿಗಳು ( ಕೃಷಿ ವಿಸ್ತರಣಾ ) ರವರು ಮಾವಿನಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಅರಿವು ಮೂಡಿಸಿದರು ಮತ್ತು ಮಾವಿನಲ್ಲಿ ಸವರುವಿಕೆ ಬಗ್ಗೆ ಮಾಹಿತಿ ನೀಡಿ ಪ್ರಾತ್ಯಕ್ಷಿಕೆ ಮುಖಾಂತರ ತೋರಿಸಿಕೊಟ್ಟರು . ಈ ಕಾರ್ಯಕ್ರಮದಲ್ಲಿ 25 ಜನ ರೈತರು ಪಾಲ್ಗೊಂಡಿದ್ದರು . ಮಾವಿನಲ್ಲಿ ರೆಂಬೆಗಳು ಒತ್ತೊತ್ತಾಗಿ ಬೆಳೆದಾಗ ಅವುಗಳಲ್ಲಿ ಕೆಲವೊಂದು ರೆಂಬೆಗಳನ್ನು ಕತ್ತರಿಸಿ ವಿರಳಗೊಳಿಸಿದರೆ ಸೂರ್ಯನ ಬೆಳಕು ಒಳಭಾಗದಲ್ಲಿ ಬೀಳುವಂತಾಗಿ ಒಳಭಾಗದಲ್ಲೂ ಕಾಯಿಕಚ್ಚುತ್ತವೆ . ಇದರಿಂದ ಇಳುವರಿ ಹಾಗೂ ಹಣ್ಣಿನ ಗುಣಮಟ್ಟ ಹೆಚ್ಚಾಗುತ್ತವೆ . ಗಿಡಗಳಿಗೆ 5-6 ವರ್ಷವಾದಾಗ ಮೊದಲ ವರ್ಷ ಮಧ್ಯದ ಒಂದೆರೆಡು ರೆಂಬೆಗಳನ್ನು ತೆಗೆದು ತೆರೆವು ಮಾಡಬೇಕು . ನಂತರದ ವರ್ಷಗಳಲ್ಲಿ ಇತರ ರೆಂಬೆಗಳನ್ನು ವಿರಳಗೊಳಿಸಲು ಕತ್ತರಿಸಬೇಕು . ಕತ್ತರಿಸಿದ ಭಾಗಗಳಿಗೆ ಶಿಲೀಂಧ್ರ ನಾಶಕ + ಕೀಟನಾಶಕದ ಮುಲಾಮನ್ನು ಲೇಪಿಸುವುದು ಅವಶ್ಯ . ಹಣ್ಣಿನ ಕೊಯ್ದು ಆದನಂತರ ಜುಲೈ- ಆಗಸ್ಟ್ ತಿಂಗಳುಗಳು ಕತ್ತರಿಸಲು ಸೂಕ್ತ ಸಮಯ .

ಇತ್ತೀಚಿನ ಸುದ್ದಿ

ಜಾಹೀರಾತು