10:30 PM Tuesday7 - January 2025
ಬ್ರೇಕಿಂಗ್ ನ್ಯೂಸ್
60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ… ಇದು 60 ಪರ್ಸೆಂಟ್‌ ಕಮಿಷನ್‌ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಪ್ರತಿಪಕ್ಷ ನಾಯಕ… ಹಣ ಕೈಯಲ್ಲಿದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ… ಅರಣ್ಯ ಒತ್ತುವರಿ, ಕಳ್ಳಬೇಟೆ ತಡೆಗೆ ಗರುಡಾಕ್ಷಿ ಅಸ್ತ್ರ: ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ರಾಜ್ಯದಲ್ಲಿ ಎಚ್ ಎಂಪಿವಿ ಸೋಂಕು: ಜನರಲ್ಲಿ ಆತಂಕ ಬೇಡ, ಎಚ್ಚರ ಇರಲಿ; ಆರೋಗ್ಯ… ತೀರ್ಥಹಳ್ಳಿಯ ಕಿತ್ತನಗದ್ದೆ ನಾಡ್ತಿಯ ಹೊಳೆಯಲ್ಲಿ ಮರಳು ಮಾಫಿಯ ಜಾಲ ಪತ್ತೆ ಎಲ್ಲ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಇಂಧನ ಸಚಿವ… ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮೂಡಿಗೆರೆ: ಹುಲಿ ದಾಳಿಗೆ ಬಾಣಂತಿ ಹಸು ಬಲಿ; ಕರುವಿನ ಆಕ್ರಂಧನ ಬೆಂಗಳೂರು: 22ನೇ ಚಿತ್ರಸಂತೆ ಉದ್ಘಾಟನೆ; ಕಲಾಕೃತಿ ಕೊಂಡು ಕಲಾವಿದರ ಬೆಂಬಲಿಸಲು ಮುಖ್ಯಮಂತ್ರಿ ಕರೆ

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಬೃಹತ್ ಜಾಥಾ

12/12/2024, 12:33

ಮಂಗಳೂರು(reporterkarnataka.com):ಶ್ರೀನಿವಾಸಪುರ ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಆಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಪಂಚಾಯಿತಿ, ಪುರಸಭೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಬೃಹತ್ ಜಾಥಾ ಶ್ರೀನಿವಾಸಪುರ ಪುರಸಭಾ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜೆಎಂಎಫ್ ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಚ್.ಆರ್. ಸಚಿನ್ ‌ಅವರು, ತಹಶೀಲ್ದಾರ್ ಜಿ.ಎನ್.ಸುಧೀದ್ರ ಅವರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರಿ, ಪುರಸಭಾ ಮುಖ್ಯಾಧಿಕಾರಿ ವಿ.ನಾಗರಾಜು, ವಕೀಲರ ಸಂಘದ ಅಧ್ಯಕ್ಷ ಎನ್.ವಿ.ಜಯರಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಮುನಿ ಲಕ್ಷ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲ್ಲೂಕು ಅಧಿಕಾರಿ ನವೀನ್ ಕುಮಾರ್ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರು ಇಂದು ನಿಧನರಾದ ಹಿನ್ನೆಲೆಯಲ್ಲಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು