1:52 PM Thursday9 - January 2025
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ… ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2… ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ… 60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ… ಇದು 60 ಪರ್ಸೆಂಟ್‌ ಕಮಿಷನ್‌ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಪ್ರತಿಪಕ್ಷ ನಾಯಕ… ಹಣ ಕೈಯಲ್ಲಿದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ… ಅರಣ್ಯ ಒತ್ತುವರಿ, ಕಳ್ಳಬೇಟೆ ತಡೆಗೆ ಗರುಡಾಕ್ಷಿ ಅಸ್ತ್ರ: ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ರಾಜ್ಯದಲ್ಲಿ ಎಚ್ ಎಂಪಿವಿ ಸೋಂಕು: ಜನರಲ್ಲಿ ಆತಂಕ ಬೇಡ, ಎಚ್ಚರ ಇರಲಿ; ಆರೋಗ್ಯ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ ತಾಲೂಕು ವಕೀಲರಿಂದ ಅನಿರ್ದಿಷ್ಟ ಪ್ರತಿಭಟನೆ: ನ್ಯಾಯಾಲಯ ಕಲಾಪಕ್ಕೆ ಬಹಿಷ್ಕಾರ

14/11/2024, 20:52

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ನ್ಯಾಯಾಲಯದ ವಕೀಲರು ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಹಲವು ವರ್ಷಗಳ ವಕೀಲರ ಬೇಡಿಕೆಯಂತೆ ಪಟ್ಟಣದಿಂದ ಚಿಂತಾಮಣಿ ಸಂಪರ್ಕ ಕಲ್ಪಿಸುವ ರಸ್ತೆ ಕಾಲೋನಿ ಕ್ರಾಸ್ ಬಳಿ ೫ ಎಕರೆ ಪ್ರದೇಶದಲ್ಲಿ ಅಂದಾಜು ೧೫ ಕೋಟಿ ವೆಚ್ಚದಲ್ಲಿ ನೂತನ ನ್ಯಾಯಾಲಯ ಹಾಗೂ ನ್ಯಾಯಾಧೀಶರ ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು ನೂತನವಾಗಿ ನಿರ್ಮಾಣವಾಗುತ್ತಿರುವ ನ್ಯಾಯಾಲಯದ ಕಲಾಪ ಆವರಣ ತುಂಬಾ ಚಿಕ್ಕದಾಗಿದೆಯೆಂದು ವಕೀಲರು ಬೇಸರ ವ್ಯಕ್ತಪಡಿಸಿ ಹಲವು ಬಾರಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರು. ಮನವಿ ಮಾಡಿದರೂ ಸಹ ಕಾಮಗಾರಿಯನ್ನು ಮುಂದುವರಿಸುತ್ತಿದ್ದಾರೆ ಎಂದು ವಕೀಲರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು.
ಇದೇ ಸಂದರ್ಭದಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಜಯರಾಮೇಗೌಡ ಮಾತನಾಡಿ, ನಮ್ಮ ತಾಲ್ಲೂಕಿಗೆ ನೂತನ ನ್ಯಾಯಾಲಯ ಸಂಕೀರ್ಣ ಮಂಜೂರಾತಿಯಾಗಿದ್ದು ತ್ವರಿತಗತಿಯಲ್ಲಿ ನ್ಯಾಯಾಲಯದ ಕಾಮಗಾರಿಯನ್ನು ಮಾಡಲಾಗುತ್ತಿದೆ. ಹೊಸ ಕಟ್ಟಡಗಳ ನಮೂನೆ ಪ್ರಕಾರ ಬಂಗಾರಪೇಟೆ, ಮುಳಬಾಗಿಲು ಹಾಗೂ ಶಿಡ್ಲಘಟ್ಟದಲ್ಲಿ ನೂತನ ನ್ಯಾಯಾಲಯ ಸಂಕೀರ್ಣಗಳು ನಿರ್ಮಾಣವಾಗಿದ್ದು ಬಹಳ ಸುಸೂತ್ರವಾಗಿ ಬಹಳ ಅಚ್ಚುಕಟ್ಟಾಗಿ ನಿರ್ಮಾಣ ಮಾಡಲಾಗಿದೆ. ಅದೇ ರೀತಿಯಾಗಿ ನಮ್ಮ ತಾಲ್ಲೂಕಿನಲ್ಲಿ ಚಿಂತಾಮಣಿ ಮುಖ್ಯ ರಸ್ತೆ ಕಾಲೋನಿ ಕ್ರಾಸ್ ಸಮೀಪ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು ಕಲಾಪದ ಆವರಣ ಬಹಳ ಚಿಕ್ಕದಾಗಿದ್ದು ಮುಂದಿನ ಪೀಳಿಗೆ, ವಕೀಲರು ಹಾಗೂ ಕಕ್ಷಿದಾರರಿಗೆ ಅನುಕೂಲವಾಗುವಂತೆ ನ್ಯಾಯಾಲಯದ ಕಲಾಪ ಆವರಣವನ್ನು ವಿಶಾಲವಾಗಿ ಮಾಡಬೇಕು ಎಂದು ಹಲವು ಬಾರಿ ಮನವಿ ಮಾಡಿದರು ಸಹ ಕಾಮಗಾರಿಯನ್ನು ಅದೇ ರೀತಿಯಾಗಿ ಮುಂದುವರೆಸುತ್ತಿರುವ ಕಾರಣ ತಾಲ್ಲೂಕಿನ ಎಲ್ಲಾ ವಕೀಲರು ಸಹ ಕಲಾಪಗಳಿಗೆ ಹಾಜರಾಗದೇ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ಸಮಸ್ಯೆ ಬಗೆಹರಿಸುವ ತನಕ ಪ್ರತಿಭಟನೆಯನ್ನು ಕೈಬಿಡುವುದಿಲ್ಲ ವೆಂದು ಸಹ ತಿಳಿಸಿದರು. ಈ ಸಂದರ್ಭದಲ್ಲಿ ಎಲ್ಲಾ ವಕೀಲರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು