6:33 PM Friday30 - January 2026
ಬ್ರೇಕಿಂಗ್ ನ್ಯೂಸ್
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್

ಇತ್ತೀಚಿನ ಸುದ್ದಿ

ಶ್ವಾನವನ್ನು ಬೆನ್ನಟ್ಟಿ ಬಾವಿಗೆ ಬಿದ್ದ 10ರ ಹರೆಯದ ಚಿರತೆ; ಅರಣ್ಯ ಇಲಾಖೆಯಿಂದ ರಕ್ಷಣೆ

11/11/2024, 19:14

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಪಾರಡಿ ಎಂಬಲ್ಲಿ ಚಿರತೆಯೊಂದು ನಾಯಿಯನ್ನು ಬೇಟೆಯಾಡಲು ಅಟ್ಟಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಾವಿಯೊಂದಕ್ಕೆ ಬಿದ್ದ ಘಟನೆ ನಡೆದಿದೆ.

ದರ್ಕಾಸು ಮನೆ ಪಿಲೋಮಿನಾ ಎಂಬವರ ಬಾವಿಗೆ ಚಿರತೆಯು ಬಿದ್ದಿತ್ತು. ಚಿರತೆಯ ಘರ್ಜನೆ ಕೇಳಿದ ಫಿಲೋಮಿನ ಕುಟುಂಬಸ್ಥರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖಾಧಿಕಾರಿಗಳ ತಂಡ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಬೃಹತ್ ಬಲೆಯ ಮೂಲಕ ಮೇಲಕ್ಕೆತ್ತಿ ಬೋನಿಗೆ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ .ಹೆಣ್ಣು ಚಿರತೆಯಾಗಿದ್ದು ಸುಮಾರು ಹತ್ತು ವರ್ಷಗಳಾಗಿವೆ ಎಂದು ಅಂದಾಜಿಸಲಾಗಿದೆ.ಬೆಳ್ಮಣ್ ಪಾರಾಡಿ ಭಾಗಗಳಲ್ಲಿ ಮನೆಯ ಅನೇಕ ನಾಯಿಗಳು ಕಾಣೆಯಾಗುತ್ತಿದ್ದು ಚಿರತೆಯ ಅಹಾರವಾಗುತಿದ್ದವು‌. ಚಿರತೆ ಸೆರೆ ಹಿಡಿದ ಕಾರಣ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಅರಣ್ಯ ಇಲಾಖೆಯ ಚಿರತೆ ರಕ್ಷಣಾ ಕಾರ್ಯಕ್ಕೆ ಭೇಷ್ ಎಂದಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು