12:42 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

01/08/2026, 15:18

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಮಾಲ್ದಾರೆ ಸಮೀಪದ ಮೀಸಲು ಅರಣ್ಯ ಪ್ರದೇಶದೊಳಗೆ ಇರುವ ಶ್ರೀ ಸಿದ್ದೇಶ್ವರ ಆವರಣದಲ್ಲಿ ಅನ್ಯ ಕೋಮಿನವರು ಗೋರಿ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಸಿದ್ದಾಪುರ ಪೊಲೀಸ್‌ ಠಾಣೆಗೆ ನೀಡಿದ ದೂರಿನ ಮೇರೆಗೆ ಸಿದ್ದಾಪುರದ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಜು 26ರಂದು ಯಾರೋ ಗೋರಿ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳು ದೇವಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದವು. ಅಲ್ಲದೆ ಸಿದ್ದಾಪುರ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು.

ದೂರಿನ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಮತ್ತು ಮಡಿಕೇರಿ ಭಾಗದ ಡಿ.ವೈ.ಎಸ್ಪಿ ಸೂರಜ್ ಮಾರ್ಗದರ್ಶನದಲ್ಲಿ ಸಿ.ಐ. ಚಂದ್ರಶೇಖ‌ರ್ ಮತ್ತು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ತನಿಖೆ ಕೈಗೊಂಡ ಪೊಲೀಸರು ಪಿರಿಯಾಪಟ್ಟಣ ತಾಲೂಕಿನ ಆಯಾರಬೀಡು ಗ್ರಾಮದ ನಿವಾಸಿಗಳಾದ ಮುಜಾಮಿಲ್(32), ಅಶ್ವಿಕ್ ಪಾಷ(28) ರಶೀದ್ ಖಾನ್ ( 30),ಸೈಯದ್ ಸಾಧಿಕ್ (34) ಆಲಂ ಶರೀಫ್ (19) ತಂಜೀವ್ ಪಾಷ(30) ಮನ್ಸೂರ್ ಪಾಷ (33) ನಿಸಾರ್ ಅಹ್ಮದ್ (33) ಎಂಬವರುಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಅರಣ್ಯ ಪ್ರದೇಶದಲ್ಲಿ ಇರುವ ದೇವಾಲಯಕ್ಕೆ ಆಗಮಿಸಲು ಬಂದಂತಹ ಎರಡು ವಾಹನಗಳನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಶ್ರೀ ಸಿದ್ದೇಶ್ವರ ದೇವಾಲಯದಲ್ಲಿ ನಡೆದ ಘಟನೆ ಸಂಬಂಧ ಹಿಂದೂ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ ದೇವಾಲಯಕ್ಕೆ ತೆರಳುವ ರಸ್ತೆಯಲ್ಲಿ ಸಿ.ಸಿ. ಕ್ಯಾಮರಾ ಅಳವಡಿಸುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ದೇವಾಲಯಕ್ಕೆ ತೆರಳುವ ರಸ್ತೆಯ ಬದಿಯಲ್ಲಿ ಸಿ.ಸಿ. ಕ್ಯಾಮರಾ ಅಳವಡಿಸಲಾಗಿದೆ. ಅಲ್ಲದೆ ಅರಣ್ಯ ಇಲಾಖೆಯ ಎರಡು ಸಿಬ್ಬಂದಿಯನ್ನು ಹಗಲಿನ ವೇಳೆ ಗಸ್ತು ತಿರುಗಲು ಮತ್ತು ಕಾವಲು ಕಾಯಲು ನಿಯೋಜನೆ ಮಾಡಲಾಗಿದೆ. ರಾತ್ರಿ ಸಮಯದಲ್ಲಿ ಕೂಡ ಮೀಸಲು ಅರಣ್ಯ ಪ್ರದೇಶದ ಒಳಗೆ ಬೇರೆಯವರು ಪ್ರವೇಶ ಮಾಡದಂತೆ ಗಮನಹರಿಸಲು ಅರಣ್ಯ ಇಲಾಖೆಗೆ ಸೇರಿದ ವಾಹನದಲ್ಲಿ ಗಸ್ತು ತಿರುಗಲು ಎರಡು ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಮೀಸಲು ಅರಣ್ಯ ಪ್ರದೇಶದ ಒಳಗೆ ಇರುವ ದೇವಾಲಯಕ್ಕೆ ಅಕ್ರಮ ಪ್ರವೇಶ ಮಾಡಿದ ಹಿನ್ನೆಲೆಯಲ್ಲಿ ಕೆಲವರ ವಿರುದ್ಧ ಕುಶಾಲನಗರ ವಲಯ ಅರಣ್ಯ ಅಧಿಕಾರಿಗಳು ಕೂಡ ಮೊಕದ್ದಮೆ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು