5:19 PM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಭಾವುಕ ಮಾತುಗಳ ಮೂಲಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ವಿದಾಯ

28/05/2026, 17:18

ಬೆಂಗಳೂರು(reporterkarnataka.com): ಹೈಕಮಾಂಡ್ ಸೂಚನೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊನ್ನೆ ಹೈಕಮಾಂಡ್ ರಾಜೀನಾಮೆ ನೀಡಿ ಎಂದು ಹೇಳಿದರು.ಅಂತೆಯೇ ಈಗ ರಾಜೀನಾಮೆ ಕೊಟ್ಟಿದ್ದೇನೆ ಎಂದರು.
ರಾಜ್ಯಸಭೆಗೆ ಹೋಗಿ ಎಂದು ಹೈಕಮಾಂಡ್ ಅವರು ಹೇಳಿದರು. ಆದ್ರೆ ನನಗೆ ರಾಷ್ಟ್ರ ರಾಜಕೀಯದಲ್ಲಿ ಆಸಕ್ತಿ ಇಲ್ಲ.‌ಕೋಮು ಶಕ್ತಿಗಳ ವಿರುದ್ಧ ನನ್ನ ಹೋರಾಟ ನಿರಂತರ ಸಿದ್ದರಾಮಯ್ಯ ಘೋಷಣೆ‌ ಮಾಡಿದರು.


ಮುಂದಿನ ಮುಖ್ಯಮಂತ್ರಿ ಬಗ್ಗೆ ಹೈಕಮಾಂಡ್ ಘೋಷಿಸಲಿದೆ.
ಕಾಂಗ್ರೆಸ್ 137 ಸ್ಥಾನಗಳನ್ನು ಹೊಂದಿದೆ. ಸಂಪೂರ್ಣ ಬಹುಮತ ಕಾಂಗ್ರೆಸ್ ಗೆ ಇದೆ.
ನನ್ನ ಪಾಲಿಗೆ ಸಂವಿಧಾನ ಧರ್ಮ. ಮತದಾರರು ಅಭಿಮಾನಿ ದೇವರು. ಸಿದ್ದರಾಮಯ್ಯ ಭಾವುಕ ನುಡಿದರು.
ನೆಲ, ಜಲ, ಭಾಷೆಯನ್ನು ನನ್ನ 8 ವರ್ಷಗಳ ಒಟ್ಟು ಅವಧಿಯಲ್ಲಿ ನಾನು ಬಿಟ್ಟು ಕೊಟ್ಟಿಲ್ಲ. ಹಣ, ಅಧಿಕಾರಕ್ಕೆ ಆಸೆ ಪಟ್ಟಿಲ್ಲ. ಬಡವರಿಗೆ ಸದಾ ನೆರವಾಗಿದ್ದೇನೆ. ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡಿದ್ದೇನೆ. ಸಂವಿಧಾನ ಸಂರಕ್ಷಣೆಗೆ ನಾನು ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ. 2 ಸಲ ಮುಖ್ಯಮಂತ್ರಿ ಆಗಲು ಅವಕಾಶ ದೊರಕಿತು ಎಂದರು.
ಅವಕಾಶ ಕೊಟ್ಟ ಸೋನಿಯಾ ಗಾಂಧಿ ಸೇರಿ ನಾಯಕರಿಗೆ ಧನ್ಯವಾದ ಸಲ್ಲಿಸಿದ ಸಿದ್ದು.
20 ವರ್ಷಗಳಿಂದ ಕಾಂಗ್ರೆಸ್ ಕಾರ್ಯ ಕರ್ತರು, ಮುಖಂಡರು ಪ್ರೀತಿ ನೀಡಿದ್ದಾರೆ.
ಅವರಿಗೆ ಎಲ್ಲರಿಗೂ ಧನ್ಯವಾದಗಳು.
ಹಳ್ಳಿಗಾಡಿನಿಂದ ಬಂದ ನಾನು ಮುಖ್ಯಮಂತ್ರಿ ಆಗುತ್ತೇನೆ ಅಂದುಕೊಂಡಿರಲಿಲ್ಲ.
ನಾನು ರಾಜಕೀಯಕ್ಕೆ ಬಂದದ್ದು ಆಕಸ್ಮಿಕ.
ಬುದ್ಧ, ಬಸವ, ಅಂಬೇಡ್ಕರ್ ಗಾಂಧೀಜಿ ಅವರ ತತ್ವದರ್ಶ ದಲ್ಲಿ ನಂಬಿಕೆ ಇಟ್ಟುಕೊಂಡು ರಾಜಕೀಯ ಮಾಡಿದ್ದೇನೆ.
ಒಂದು ಕುಟುಂಬವಾಗಿ ಬಾಳಬೇಕು ಎಂಬ ನಂಬಿಕೆ ನನ್ನದು. ಇಡೀ ಸಮಾಜ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ಸಮಾನ ಅವಕಾಶ ಎಲ್ಲರಿಗೂ ಸಿಗಬೇಕು ಎಂದು ಬಯಸಿದವನು ನಾನು ಎಂದು ಅವರು ನುಡಿದರು.
ಚುನಾವಣೆಯ ಪ್ರಣಾಳಿಕೆಯಲ್ಲಿ ಹೇಳಿದ್ದನ್ನು ಜಾರಿಗೊಳಿಸಿದ್ದೇವೆ. ಗ್ಯಾರಂಟಿ ಯೋಜನೆ ಕೂಡ ಯಶಸ್ವಿ ಆಗಿ ಜಾರಿಗೆ ತಂದಿದ್ದೇನೆ. ಜನತೆಗೆ ಕೊಟ್ಟ ಭರವಸೆ, ವಚನವನ್ನು ಈಡೇರಿಸುವ ಕೆಲಸ ಮಾಡಿದ್ದೇನೆ.ಇದು ಸಂತೃಪ್ತಿ ತಂದಿದೆ ಎಂದು ಸಿದ್ದರಾಮಯ್ಯ ನುಡಿದರು.
ಸರಕಾರ ಸಾಲ ಮಾಡಿದೆ ಅನ್ನುವುದು ಸುಳ್ಳು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು