4:17 PM Tuesday10 - November 2026
ಬ್ರೇಕಿಂಗ್ ನ್ಯೂಸ್
ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ…

ಇತ್ತೀಚಿನ ಸುದ್ದಿ

ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ

25/09/2026, 15:38

ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ರಾಜಕೀಯದ ಬಳಿಕ ಇದೀಗ ಸಿನಿಮಾ ಲೋಕಕ್ಕೆ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಕನ್ನಡದ ಸಿನಿಮಾವೊಂದರಲ್ಲಿ ಅಭಿನಯಿಸಲು ಬಣ್ಣ ಹಚ್ಚಿದ್ದಾರೆ.
ಹೌದು. ಮಾಜಿ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಸಿನಿಮಾವೊಂದರಲ್ಲಿ ನಟಿಸಲು ಸಜ್ಜಾಗಿದ್ದು, ಚುನಾವಣಾ ರಾಜಕೀಯದಿಂದ ದೂರ ಸರಿಯುವ ಮಾತಿನ ಬೆನ್ನಲ್ಲೇ ಇದೀಗ ಬೆಳ್ಳಿತೆರೆಗೆ ಕಾಲಿಟ್ಟಿರುವುದು ತೀವ್ರ ಕುತೂಹಲ ಮೂಡಿಸಿದೆ. ನಿಜ ಜೀವನದಲ್ಲಿ ಕರ್ನಾಟಕದ ಇತಿಹಾಸದಲ್ಲಿಯೇ ಅತ್ಯಂತ ದೀರ್ಘಕಾಲದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆ ನಿರ್ಮಿಸಿರುವ ಸಿದ್ದರಾಮಯ್ಯ, ಈಗ ರೀಲ್ ಲೈಫ್‌ನಲ್ಲೂ ಮುಖ್ಯಮಂತ್ರಿಯ ಪಾತ್ರದಲ್ಲೇ ಕಾಣಿಸಿಕೊಳ್ಳುತ್ತಿದ್ದಾರೆ ಎಂಬುದು ವಿಶೇಷ. ನಟ ಹಾಗೂ ನಿರ್ಮಾಪಕ ರಾಜೇಶ್ ಗೌಡ ಅವರ ಆರ್.ಎ. ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ಮೂಡಿಬರಲಿರುವ ಹೊಸ ಸಿನಿಮಾಗೆ ‘ಮುಖ್ಯಮಂತ್ರಿ’ ಎಂಬ ಟೈಟಲ್ ಇಡುವ ಸಾಧ್ಯತೆಯಿದ್ದು, ಈಗಾಗಲೇ ನಿರ್ದೇಶಕರು ಹೇಳಿದ ಕಥೆಯನ್ನು ಕೇಳಿ ಮೆಚ್ಚಿಕೊಂಡಿರುವ ಸಿದ್ದರಾಮಯ್ಯ ಅವರು, ಸಿನಿಮಾದಲ್ಲಿ ಪ್ರಮುಖವಾಗಿ ಬರುವ ಮುಖ್ಯಮಂತ್ರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಿನಿಮಾದ ಚಿತ್ರಕಥೆ ಬರೆಯುವುದರಿಂದ ಹಿಡಿದು, ಚಿತ್ರೀಕರಣ, ಪೋಸ್ಟ್ ಪ್ರೊಡಕ್ಷನ್, ಸೆನ್ಸಾರ್ ಪ್ರಕ್ರಿಯೆ ಹಾಗೂ ಚಿತ್ರಮಂದಿರದಲ್ಲಿ ಪ್ರದರ್ಶನ ಮಾಡುವವರೆಗಿನ ಎಲ್ಲಾ ಹಂತಗಳನ್ನು ಕೇವಲ 48 ಗಂಟೆಗಳಲ್ಲಿ ಮುಗಿಸಿ ವಿಶ್ವ ದಾಖಲೆ ಬರೆಯುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಚಿತ್ರತಂಡ ಹೊಂದಿದ್ದು, ಈ ಚಿತ್ರದ ಪ್ರಮುಖ ಆಕರ್ಷಣೆ ಎಂದರೆ ಮಾಜಿ ಸಿಎಂ ಸಿದ್ದರಾಮಯ್ಯ. ಸುದೀರ್ಘ ಮುಖ್ಯಮಂತ್ರಿ ಎಂಬ ದಾಖಲೆ ನಿರ್ಮಿಸಿದ್ದ ಸಿದ್ದರಾಮಯ್ಯ ಇದೀಗ ಸಿನಿಲೋಕದಲ್ಲಿಯೂ ಕೇವಲ 48 ಗಂಟೆಗಳಲ್ಲಿ ಸಿನಿಮಾ ಮುಗಿಸುವ ಹೊಸ ದಾಖಲೆ ನಿರ್ಮಿಸಲು ಸಜ್ಜಾಗಿದ್ದಾರೆ.ಸಿದ್ದರಾಮಯ್ಯ ಅವರು ಪೂರ್ಣ ಪ್ರಮಾಣದ ಪಾತ್ರದಲ್ಲಿ ಸಿನಿಮಾದಲ್ಲಿ ಅಭಿನಯಿಸುತ್ತಿರುವುದು ಇದೇ ಮೊದಲಾದರೂ ಅವರಿಗೆ ನಟನೆ ಹಾಗೂ ಸಿನಿಮಾ ಹೊಸದೇನಲ್ಲ. ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅವರು ನಾಟಕಗಳಲ್ಲಿ ಅಭಿನಯಿಸಿದ್ದರು. ಅಲ್ಲದೆ, 2017 ರಲ್ಲಿ ಕವಿತಾ ಲಂಕೇಶ್ ನಿರ್ದೇಶನದ ಸಮ್ಮರ್ ಹಾಲಿಡೇಸ್ ಎಂಬ ಮಕ್ಕಳ ಚಿತ್ರದಲ್ಲೂ ಸಣ್ಣದೊಂದು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದರ ಜೊತೆಗೆ, ಸಿದ್ದರಾಮಯ್ಯ ಅವರ ಜೀವನಗಾಥೆಯನ್ನಾಧರಿಸಿದ ಲೀಡರ್ ರಾಮಯ್ಯ ಎಂಬ ಬಯೋಪಿಕ್ ಚಿತ್ರದ ಕೆಲಸಗಳೂ ಪ್ರತ್ಯೇಕವಾಗಿ ನಡೆಯುತ್ತಿದ್ದು, ಅದರಲ್ಲಿ ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ ಸೇತುಪತಿ ಪ್ರಮುಖ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಇನ್ನು ಈ ಬಗ್ಗೆ ಸಿದ್ದರಾಮಯ್ಯನವರ ಆಪ್ತ ಹೆಚ್​​ಎಂ ರೇವಣ್ಣ ಮಾತನಾಡಿದ್ದು, ಹಿಂದೆ ಅದ್ಯಾವುದೋ ಸಿನಿಮಾದಲ್ಲಿ ನಟಿಸಿದ್ರು. ಮೊದ ಮೊದಲು ಹೇ ಬೇಡ ಇದೆಲ್ಲ ಆಗಲ್ಲ ಅಂತ ಹೇಳಿದ್ರು. ಆಮೆಲೇ ಹೇಳಿ ಒಪ್ಪಿಸಿದ್ದೇವೆ. 48 ಗಂಟೆಗಳಲ್ಲಿ ಸಿನಿಮಾವನ್ನು ಶೂಟ್ ಮಾಡಲು ತಂಡ ಪ್ಲಾನ್ ಮಾಡಿದ್ದು, ಇದರಲ್ಲಿ ಡಿ.ಕೆ. ಶಿವಕುಮಾರ್, ಉಮಾಶ್ರಿ ಅವರು ನಟಿಸೋ ಸಾಧ್ಯತೆ ಇದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು