3:42 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ ಬೊಮ್ಮಾಯಿ ಲೇವಡಿ

24/11/2025, 18:46

*ರೆಬೆಲಿಯನ್ ವರ್ಸಸ್ ಕಾಂಪ್ರಮೈಸ್ ಸಿದ್ದರಾಮಯ್ಯ ನಡುವಿನ ಹೋರಾಟ: ಬಸವರಾಜ ಬೊಮ್ಮಾಯಿ*

ಮೈಸೂರು(reporterkarnataka.com): ನಾನೇ 5 ವರ್ಷ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು. ಇದು ರೆಬೆಲಿಯನ್ ಸಿದ್ದರಾಮಯ್ಯ ವರ್ಸಸ್ ಕಾಂಪ್ರಮೈಸ್ ಸಿದ್ದರಾಮಯ್ಯ ನಡುವಿನ ಹೋರಾಟ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲಿನಂತೆ ರೆಬೆಲಿಯನ್ ಸಿದ್ದರಾಮಯ್ಯ ಆದರೆ ಯಾವುದೇ ಕಾರಣಕ್ಕೂ ಅಧಿಕಾರ ಬಿಟ್ಟು ಕೊಡುವುದಿಲ್ಲ.
ಕಾಂಪ್ರಮೈಸ್ ಸಿದ್ದರಾಮಯ್ಯ ಆದರೆ ಬಿಟ್ಟುಕೊಡುತ್ತಾರೆ‌.
ಸಿದ್ದರಾಮಯ್ಯ ಎಷ್ಟರ ಮಟ್ಟಿಗೆ ತಮ್ಮ ಗಟ್ಟಿತನ ಉಳಿಸಿಕೊಂಡಿದ್ದಾರೆ ಎಂಬುದು ಈ ತಿಂಗಳಿನಲ್ಲಿ ಗೊತ್ತಾಗಲಿದೆ. ನಾವು ನೋಡಿದ ಸಿದ್ದರಾಮಯ್ಯ ಮೊದಲಿನಿಂದಲೂ ರೆಬೆಲಿಯನ್. ಅವರದ್ದು ಯಾವಗಲೂ ಗಟ್ಟಿ ಗಡಸುತನದ ರಾಜಕಾರಣ. ಅದೇ ಮೂಲ ಸಿದ್ದರಾಮಯ್ಯ ಈಗ ಅಧಿಕಾರದ ಆಸೆಗಾಗಿ ಬದಲಾಗಿದ್ದಾರಾ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು.
ಬಿಜೆಪಿ ಸರ್ಕಾರದ ವಿರುದ್ದ ಕಮಿಷನ್ ಆರೋಪ ಮಾಡಿದ್ದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಸರ್ಕಾರದ ಮೇಲೆ ಕಮಿಷನ್ ಆರೋಪ ಮಾಡಿದ್ದು ಸುಳ್ಳು ಎಂಬುದು ತನಿಖಾ ವರದಿಯಿಂದ ಸಾಬೀತಾಗಿದೆ. ಈಗ ಅವರ ಸರ್ಕಾರದದಲ್ಲಿ ಎಲ್ಲಾ ಇಲಾಖೆಯಲ್ಲಿ ಎಷ್ಟೆಷ್ಟು ಕಮಿಷನ್ ನಡೆಯುತ್ತಿದೆ ಎಂಬುದು ಎಲ್ಲರಿಗೂ ಗೊತ್ತಾಗಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ದಿನವೇ ಕಾಂಗ್ರೆಸ್ ಮನೆಯಲ್ಲಿ ಬಿರುಕು ಶುರುವಾಯಿತು. ಈಗ ಆ ಬಿರುಕು ಮತ್ತಷ್ಟು ಹೆಚ್ಚಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಒಳ ಜಗಳದ ವಿಚಾರದ ಕುರಿತು ಕೆಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಕಾಂಗ್ರೆಸ್ ಪಕ್ಷ ನಮ್ಮ‌ ವಿರೋಧಿ ಅವರ ಸಿದ್ಧಾಂತವನ್ನು ಬಿಜೆಪಿ ವಿರೋಧಿಸುತ್ತಾ ಬಂದಿದೆ. ದೇಶದಲ್ಲಿ ಕಾಂಗ್ರೇಸ್ಸೇತರ ಸರ್ಕಾರ ಇ‌ರಬೇಕು ಎಂಬುದು ನಮ್ಮ‌ ನಿಲುವು ರಾಜ್ಯ ಕಾಂಗ್ರೆಸ್ ಸದ್ಯದ ಪರಿಸ್ಥಿತಿ ಲಾಭ ಪಡೆಯುವ ವಿಚಾರ ಸಮಯ ಬಂದಾಗಲೆಲ್ಲ ಈ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು