12:25 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

Siddaramaia With Rahul | ರಾಹುಲ್ ಗಾಂಧಿ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ: ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ

03/04/2025, 20:36

ನವದೆಹಲಿ(reporterkarnataka.com): ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಪರವಾಗಿ ಧ್ವನಿ ಎತ್ತಿದ್ದರು.


ಇಂದು ರಾಹುಲ್ ಗಾಂಧಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಅವರು ಪಾಲ್ಗೊಂಡು ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದರು.
ಸಭೆ ಫಲಪ್ರದವಾಗಿದ್ದು “ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ” ಸ್ಥಾಪಿಸುವ ತೀರ್ಮಾನಕ್ಕೆ ಬರಲಾಗಿದೆ. ಸಂಬಂಧಿತ ಸಂಸ್ಥೆಗಳಿಂದ ಶೇ. 5ರಷ್ಟು ಸೆಸ್ ಸಂಗ್ರಹಿಸುವುದು ಮತ್ತು ಉಳಿದ ಅಗತ್ಯ ಹಣವನ್ನು ಸರ್ಕಾರವೇ ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸುವುದು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು