5:19 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಕಾರಿನ ಮೇಲೆ ದಾಳಿ ಮಾಡಲು ಬಂದವರಲ್ಲಿ ಇಬ್ಬರ ಕೈಯಲ್ಲಿ ಕತ್ತಿ ಇತ್ತು: ಕೆಪಿಪಿಸಿ ವಕ್ತಾರ ಲಕ್ಷ್ಮಣ್ ಸ್ಫೋಟಕ ಹೇಳಿಕೆ

21/08/2022, 01:15

ಮಡಿಕೇರಿ(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ದಾಳಿ ಮಾಡಲು ಬಂದವರಲ್ಲಿ ಇಬ್ಬರ ಬಳಿ ಕತ್ತಿ ಇತ್ತು ಎಂದು ಕೆಪಿಸಿಸಿ ವಕ್ತಾರ, ಕೊಡಗು ಉಸ್ತುವಾರಿ ಲಕ್ಷ್ಮಣ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಪೊಲೀಸ್ ವೈಫಲ್ಯವನ್ನು ಖಂಡಿಸಿ ಮಡಿಕೇರಿ ಎಸ್.ಪಿ ಕಚೇರಿ ಮುಂದೆ ಶುಕ್ರವಾರ ಕೊಡಗು ಕಾಂಗ್ರೆಸ್ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದ ಲಕ್ಷ್ಮಣ್, ಸಿದ್ದರಾಮಯ್ಯ ಕಾರಿನ ಮೇಲೆ ದಾಳಿ ಮಾಡಲು ಬಂದವರಲ್ಲಿ ಇಬ್ಬರ ಕೈಯಲ್ಲಿ ಕತ್ತಿ ಇತ್ತು, ನಾನು ಕಾರಿನೊಳಗೆ ಇದ್ದೆ. ಇಬ್ಬರು ಕತ್ತಿ ತಕೊಂಡು ಹೊಡೆಯಲಿಕೆ ಬಂದರು, ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಚುಚ್ಚಿ ಬಿಡುತ್ತಿದ್ದರು ಎಂದು ಗಂಭೀರ ಆರೋಪ ಮಾಡಿದ ಅವರು, ಇದರ ಬಗ್ಗೆ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಗೂಂಡಾ ಕಾಯ್ದೆಯಡಿ ಬಂಧಿಸಬೇಕೆಂದು ಒತ್ತಾಯಿಸಿದರು.

26 ರಂದು ಮಡಿಕೇರಿ ಎಸ್.ಪಿ ಕಚೇರಿ ಮುತ್ತಿಗೆ ಹೋರಾಟ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದ್ದು, ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ 70 ಕ್ಕೂ ಹೆಚ್ಚು ಶಾಸಕರು ಹೋರಾಟದಲ್ಲಿ ಭಾಗವಹಿಸಲಿದೆ ಎಂದರು.  

ಈ ಘಟನೆಯಿಂದಾಗಿ ಬಿಜೆಪಿಗರು ರಾಷ್ಟ್ರಮಟ್ಟದಲ್ಲಿ ಕೊಡಗಿನ ಹೆಸರನ್ನು ಕೆಡಿಸಿದ್ದಾರೆಂದು ದೂರಿದರು.

ಇತ್ತೀಚಿನ ಸುದ್ದಿ

ಜಾಹೀರಾತು