3:29 AM Monday9 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಸಿಎಂ ಆಗಲು ಡಿಕೆಶಿ ಒಪ್ಪಿಗೆ: ಶಿಮ್ಲಾದಿಂದ ಕರೆ ಮಾಡಿ ರಾಜಿ ಸೂತ್ರಕ್ಕೆ ಒಪ್ಪಿಸಿದ ಸೋನಿಯಾ ಗಾಂಧಿ

18/05/2023, 11:05

ನವದೆಹಲಿ(reporterkarnataka.com): ರಾಜ್ಯದ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ಕೊನೆಗೂ ಅಂತ್ಯಗೊಂಡಿದೆ. ಕಾಂಗ್ರೆಸ್ ಪರಮೋಚ್ಚ ನಾಯಕಿ ಸೋನಿಯಾ ಗಾಂಧಿ ಅವರ ಮಧ್ಯಪ್ರದೇಶದಿಂದ ಬಿಕ್ಕಟ್ಟು ಶಮನಗೊಂಡಿದೆ. ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿಯಾಗಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗ್ರೀನ್ ಸಿಗ್ನಲ್ ತೋರಿಸಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.
ಮುಖ್ಯಮಂತ್ರಿ ಹುದ್ದೆಗೆ ಕಳೆದ 4 ದಿನಗಳಿಂದ ಪಟ್ಟು ಹಿಡಿದಿರುವ ಶಿವಕುಮಾರ್ ಜತೆ ಸೋನಿಯಾ ಗಾಂಧಿ ಅವರು ದೂರವಾಣಿ ಮೂಲಕ ಮಾತನಾಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಿಮಾಚಲ ಪ್ರದೇಶದಲ್ಲಿರುವ ಸೋನಿಯಾ ಅವರು ದೂರವಾಣಿ ಮೂಲಕ ಶಿವಕುಮಾರ್ ಜತೆ ಮಾತುಕತೆ ನಡೆಸಿದ್ದಾರೆ. ಮೊದಲ ಅರ್ಧ ಅವಧಿ ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲು ಒಪ್ಪಿಕೊಂಡಿದ್ದಾರೆ. ಲೋಕಸಭೆ ಚುನಾವಣೆ ಮುಗಿಯುವವರೆಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯುವಂತೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು