ಇತ್ತೀಚಿನ ಸುದ್ದಿ
ಸಿದ್ದರಾಮಯ್ಯಗೆ ಜೀವ ಬೆದರಿಕೆ: ಸಂಪೂರ್ಣ ತನಿಖೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ
20/08/2022, 10:42

ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆಯೊಡ್ಡಿರುವ ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಆ ಬಗ್ಗೆ ಸಂಪೂರ್ಣ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮತಾಡಿದ ಬೊಮ್ಮಾಯಿ, ನಾನು ನೇರವಾಗಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದು ಸಿದ್ದರಾಮಯ್ಯ ಅವರಿಗೆ ಅಥವಾ ಅವರ ಸಿಬ್ಬಂದಿಗೆ ಬೆದರಿಕೆ ಕರೆಗಳು ಬಂದಿದ್ದರೆ ವಿವರಗಳನ್ನು ನೀಡಲು ತಿಳಿಸಿದ್ದೇನೆ ಎಂದು ಹೇಳಿದರು.
ಈ ಕುರಿತು ಡಿಜಿ ಅವರನ್ನು ಕರೆದು ಮಾತನಾಡಿದ್ದು ಈ ವಿಚಾರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಎರಡೂ ಕಡೆ ಇದು ನಡೆಯುತ್ತಿದ್ದು, ಇನ್ನೊಬ್ಬರ ಮನಸ್ಸಿಗೆ ಘಾಸಿ ಮಾಡುವಂತಹ ಪ್ರಚೋದನಕಾರಿ ಹೇಳಿಕೆಯನ್ನು ಕೊಡಬಾರದು. ಈ ಬಗ್ಗೆ ಕಟ್ಟುನಿಟ್ಟಾಗಿ ಆದೇಶಗಳನ್ನು ನೀಡಿ. ವಿರೋಧ ಪಕ್ಷದ ನಾಯಕರಿಗೆ ಸೂಕ್ತ ಭದ್ರತೆಯನ್ನು ಒದಗಿಸಲು ಸೂಚಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.