ಇತ್ತೀಚಿನ ಸುದ್ದಿ
ಸಿದ್ದರಾಮಯ್ಯ ಪಟ್ಟಾಭಿಷೇಕ: ಬೆಂಗಳೂರಿಗೆ ನಾಯಕರ ದಂಡು; ಶಾಂಗ್ರಿಲಾ ಹೋಟೆಲ್ ನಲ್ಲಿ ರಾಹುಲ್, ಪ್ರಿಯಾಂಕ
20/05/2023, 12:08
ಬೆಂಗಳೂರು(reporterkarnataka.com): ಕಾಂಗ್ರೆಸ್ ಸರಕಾರದ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿದ್ದು, ನಗರ ಶಾಂಗ್ರಿಲಾ ಹೋಟೆಲ್ ಗೆ ನಾಯಕರ ದಂಡೇ ಆಗಮಿಸಿದೆ.
ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೆಚ್ಚುವರಿ ಕಾರ್ಯರ್ಶಿ ಐಎನ್ ಎಸ್ ಪ್ರಸಾದ್ ಸಹಿತ ಹಿರಿಯ ಅಧಿಕಾರಿಗಳನ್ನು ತಮ್ಮ ನಿವಾಸಕ್ಕೆ ಕರೆಸಿ ರಾಜ್ಯದ ಹಣಕಾಸು ಸ್ಥಿತಿಗತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ 5 ಗ್ಯಾರಂಟಿ ಯೋಜನೆ ಕಾರ್ಯಗತ ಮಾಡುವ ನಿಟ್ಟಿನಲ್ಲಿ ಈ ಸಭೆ ಮಹತ್ವದ್ದಾಗಿದೆ.
ಇತ್ತ ಕಡೆ ಹೊಟೇಲ್ ಶಾಂಗ್ರಿಲಾಕ್ಕೆ ನಾಯಕರುಗಳ ದಂಡೇ ಆಗಮಿಸಿದೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಬಿಹಾರ ಮುಖ್ಯಮಂತ್ರಿ ನಿತಿನ್ ಕುಮಾರ್, ಕೆ.ಸಿ. ವೇಣುಗೋಪಾಲ್, ಖ್ಯಾತ ನಟ ಕಮಲ್ ಹಾಸನ್ ಮುಂತಾದವರು ಆಗಮಿಸಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣ ಗಣನೆ ಆರಂಭವಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ಸಮಾರಂಂಭ ನಡೆಯಲಿದೆ.
ರಾಜ್ಯ ಪಾಲ ಥಾಮರ್ ಚಂದ್ ಗೆಹ್ಲೋಟ್ ಅವರು ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮತ್ತು ಇತರ 8 ಮಂದಿ ಸಚಿವರು ಕೂಡ ಈ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಡಾ. ಜಿ. ಪರಮೇಶ್ವರ್, ರಾಮಲಿಂಗಾ ರೆಡ್ಡಿ, ಪ್ರಿಯಾಂಕ್ ಖರ್ಗೆ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಕೆ.ಎಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹಮ್ಮದ್ ಸಚಿನರುಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.