5:56 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಏನ್  ಮಹಾನ್ ಹರಿಶ್ಚಂದ್ರರಾ ? ಅವರಿಂದ ನಾನು ರಾಜಕೀಯ ಕಲಿಯಬೇಕಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ ಗರಂ

18/06/2021, 21:18

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನ್ ಮಹಾನ್ ಹರಿಶ್ಚಂದ್ರರಾ ? ಅವರೇನು ಸಾಚಾನ? ಸಿದ್ದರಾಮಯ್ಯ ಅವರಿಂದ ರಾಜಕೀಯ ಮಾಡೋದನ್ನ ನಾನು ಕಲಿಯಬೇಕಿಲ್ಲ ಎಂದು ಜನತಾದಳ ನಾಯಕ ಎಚ್. ಡಿ.ಕುಮಾರಸ್ವಾಮಿ ಹೇಳಿದರು.

ಮಾಲೂರಿನಲ್ಲಿ ಜೆಡಿಎಸ್ ಮುಖಂಡ ಜಿ.ಇ.ರಾಮೇಗೌಡ ಆಯೋಜಿಸಿದ 2000 ಸಾವಿರ ಕೊರೊನಾ ವಾರಿಯರ್ಸ್ ಗಳಿಗೆ ದಿನಸಿ ಕಿಟ್ ವಿತರಣೆ ಹಾಗೂ ಕೊರೊನಾದಿಂದ  ಮೃತಪಟ್ಟ ಕುಟುಂಬಕ್ಕೆ 10 ಸಾವಿರ ರೂ. ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು 

ನನ್ನ ಪಕ್ಷವನ್ನ ದುಡ್ಡಿಗಾಗಿ ಅಡಮಾನ ಇಟ್ಟಿಲ್ಲ ನಾನು. ಜೆಡಿಎಸ್ ಪಕ್ಷವನ್ನ ಹಣಕ್ಕಾಗಿ ಎಲ್ಲೂ ಅಡ ಇಟ್ಟಿಲ್ಲ, ಜನರ ಒಳಿತಿಗಾಗಿ ಇರುವ ಪಕ್ಷ ನಮ್ಮದು. ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ಪಕ್ಷದ ವಿರುದ್ದ ಕುಮಾರಸ್ವಾಮಿ ಹರಿಹಾಯ್ದರು.

2008ರ ಚುನಾವಣೆಯಲ್ಲಿ ನೀವೇ ಯಡಿಯೂರಪ್ಪ ಅವರ ಬಳಿ ಹಣ ಪಡೆದಿದ್ದೀರಾ? ಇತಿಹಾಸ ಇದೆ, ನಿಮ್ಮ ಜಾಯಮಾನ ಅದು. 2008ರಲ್ಲಿ ಸಿದ್ದರಾಮಯ್ಯ ಆಪ್ತರೊಬ್ಬರು ಹಣ ಪಡೆದಿದ್ದಾರೆ. ನಿಮ್ಮ ಆಪ್ತರು ಎಷ್ಟು ಹಣ ಪಡೆದಿದ್ದರು. ಆಪರೇಷನ್ ಕಮಲದಲ್ಲಿ ಹಣವನ್ನು ಪಡೆದಿದ್ದರು. ಯಾವ ಯಾವ ಸಂಧರ್ಭದಲ್ಲಿ ಯಾರ ಕುತ್ತಿಗೆ ಕೊಯ್ದಿರಿ ಅಂತಾ ಗೊತ್ತು. ನನ್ನ ಪಕ್ಷದ ಬಗ್ಗೆಯಾಗಲಿ, ನನ್ನ ಬಗ್ಗೆಯಾಗಲಿ ಲಘುವಾಗಿ ಮಾತಾಡಿದ್ರೆ ಹುಷಾರ್ ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು