3:51 AM Tuesday17 - June 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ…

ಇತ್ತೀಚಿನ ಸುದ್ದಿ

Siddu Budget | ರಾಜ್ಯ ಬಜೆಟ್ 2025-26: ಮುಖ್ಯಾಂಶಗಳು ಇಲ್ಲಿದೆ ಓದಿ..

07/03/2025, 11:59

ಬೆಂಗಳೂರು(reporterkarnataka.com):ಆಯವ್ಯಯ 2025-26 ರ ಮುಖ್ಯಾಂಶಗಳು;
ಆಯವ್ಯಯ ಪಕ್ಷಿನೋಟ ಆಯವ್ಯಯ ಗಾತ್ರ (ಸಂಚಿತ ನಿಧಿ) ‌೪,೦೯,೫೪೯ ಕೋಟಿ ರೂ.ಗಳು ಒಟ್ಟು ಸ್ವೀಕೃತಿ – 4,08,647 ಕೋಟಿ ರೂ.; ರಾಜಸ್ವ ಸ್ವೀಕೃತಿ ೨,೯೨,೪೭೭ ಕೋಟಿ ರೂ.; ಸಾರ್ವಜನಿಕ ಋಣ-೧,೧೬,೦೦೦ ಕೋಟಿ ರೂ. ಸೇರಿದಂತೆ ಬಂಡವಾಳ ಸ್ವೀಕೃತಿ 1,16,17೦ ಕೋಟಿ ರೂ.
ಒಟ್ಟು ವೆಚ್ಚ-೪,೦೯,೫೪೯ ಕೋಟಿ ರೂ. ರಾಜಸ್ವ ವೆಚ್ಚ-೩,೧೧,೭೩೯ ಕೋಟಿ ರೂ., ಬಂಡವಾಳ ವೆಚ್ಚ-೭೧,೩೩೬ ಕೋಟಿ ರೂ. ಹಾಗೂ ಸಾಲ ಮರುಪಾವತಿ- ೨೬,೪೭೪ ಕೋಟಿ ರೂ.ಎಸ್‌.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಅಡಿಯಲ್ಲಿ ಆಯವ್ಯಯದಲ್ಲಿ ಒದಗಿಸಿದ ಅನುದಾನ ೪೨,೦೧೮ ಕೋಟಿ ರೂ. ಎಸ್‌.ಸಿ.ಎಸ್.ಪಿ. ಅಡಿ ೨೯,೯೯೨ ಕೋಟಿ ರೂ. ಹಾಗೂ ಟಿ.ಎಸ್.ಪಿ. ಅಡಿ 1೨,೦೨೬ ಕೋಟಿ ರೂ.ಮಹಿಳಾ ಆಯವ್ಯಯದಲ್ಲಿ ಒದಗಿಸಿದ ಅನುದಾನ ೯೪,೦೮೪ ಕೋಟಿ ರೂ.
ಮಕ್ಕಳ ಆಯವ್ಯಯದಲ್ಲಿ ಒದಗಿಸಿದ ಅನುದಾನ- ೬೨,೦೩೩ ಕೋಟಿ ರೂ.
ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ 8000 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ.
2025-26 ನೇ ಸಾಲಿನ ಹೊಸ ಯೋಜನೆಗಳು
ಕೃಷಿ
ರೈತ ಸಮೃದ್ಧಿ ಯೋಜನೆಯಡಿ ೧೦ ಕೃಷಿ ಹವಾಮಾನ ವಲಯಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳ ಅಭಿವೃದ್ಧಿ
ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 428 ಕೋಟಿ ರೂ. ವೆಚ್ಚದಲ್ಲಿ 50 ಸಾವಿರ ರೈತರಿಗೆ ಸಹಾಯಧನ ಸೌಲಭ್ಯ.
ಹನಿ ಮತ್ತು ತುಂತುರು ನೀರಾವರಿ ಘಟಕ ಅಳವಡಿಕೆಗೆ ಕೃಷಿ ಇಲಾಖೆಯಡಿ ಒಟ್ಟು 1.81 ಲಕ್ಷ ರೈತರಿಗೆ 440 ಕೋಟಿ ರೂ. ಸಹಾಯಧನ
ತೊಗರಿ ಉತ್ಪಾದನೆ ಉತ್ತೇಜನಕ್ಕೆ 88 ಕೋಟಿ ರೂ.
ರಾಜ್ಯದಲ್ಲಿ 6000 ಕಿರು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ.
ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ
ಬೆಳೆಗಳ ಕುರಿತು ನಿಖರ ತೀರ್ಮಾನ ಕೈಗೊಳ್ಳಲು ನೆರವು ನೀಡುವ ಡಿಜಿಟಲ್‌ ಕೃಷಿ ಸೇವೆಗಳ ಕೇಂದ್ರ ಸ್ಥಾಪನೆ.
ಕೃಷಿ ಹವಾಮಾನ ವಲಯಗಳ ವರ್ಗೀಕರಣವನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ.
ರೈತರ ಜೀವನೋಪಾಯ ಸುಧಾರಣೆಗೆ ಸಮಗ್ರ ಮಳೆಯಾಶ್ರಿತ ಕೃಷಿ ನೀತಿ ಜಾರಿ.
ಕೃಷಿ ಇಲಾಖೆಯ 58 ಪ್ರಯೋಗಾಲಯಗಳ ಬಲವರ್ಧನೆ.
20 ಕೋಟಿ ರೂ. ವೆಚ್ಚದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್‌ಗಳ ಸ್ಥಾಪನೆ; ಉತ್ತರ ಕನ್ನಡ ಜಿಲ್ಲೆ, ಜೋಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕಾಗಿ ಪರಿವರ್ತಿಸಲು ಕ್ರಮ.
ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮೂಲಸೌಕರ್ಯ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ.
ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್‌ ಸೌಲಭ್ಯ.
ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ.
ಅಥಣಿಯಲ್ಲಿ ಕೃಷಿ ಕಾಲೇಜು ಸ್ಥಾಪಿಸುವ ಕುರಿತು ಕಾರ್ಯಸಾಧ್ಯತ ವರದಿ ಪಡೆಯಲು ಕ್ರಮ
ತೋಟಗಾರಿಕೆ
95 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಜಾರಿ.
ತೋಟಗಾರಿಕಾ ಬೆಳೆಗಳ ಕುರಿತು ರೈತರಿಗೆ ನೈಜ ಸಮಯದ ಮಾಹಿತಿ ನೀಡುವ ಜ್ಞಾನಕೋಶ ಸ್ಥಾಪನೆ.
ರಾಜ್ಯದ GI ಟ್ಯಾಗ್‌ ಹೊಂದಿದ ಹಾಗೂ ದೇಸಿ ತೋಟಗಾರಿಕಾ ಬೆಳೆಗಳನ್ನು ಸಂರಕ್ಷಿಸಲು ಬೀಜ ಬ್ಯಾಂಕ್ ಸ್ಥಾಪನೆ.
ಬ್ಯಾಡಗಿ ಮೆಣಸಿನಕಾಯಿಯನ್ನು ರೋಗಗಳಿಂದ ಸಂರಕ್ಷಿಸಲು ಸಂಶೋಧನೆಗೆ ಉತ್ತೇಜನ‌.
ತೋಟಗಾರಿಕಾ ಬೆಳೆಗಳಿಗೆ ಹನಿ ನೀರಾವರಿಯಡಿ ೫೨,೦೦೦ ಬೆಳೆಗಾರರಿಗೆ ೪೨೬ ಕೋಟಿ ಸಹಾಯಧನ ಒದಗಿಸಲು ಕ್ರಮ
ಇಲಾಖೆಯ ಕ್ಷೇತ್ರಗಳಡಿ ತೋಟಗಾರಿಕಾ ಪ್ರವಾಸೋದ್ಯಮಕ್ಕೆ ಉತ್ತೇಜನ
ಗದಗ ಜಿಲ್ಲೆಯ ಡಂಬಳದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ.
ರೇಷ್ಮೆ
ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್‌ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹ
ರಾಮನಗರ ಮತ್ತು ಶಿಡ್ಲಘಟ್ಟ ಹೈ-ಟೆಕ್‌ ರೇಷ್ಮೆ ಗೂಡಿನ ಮಾರುಕಟ್ಟೆಯ ಎರಡನೇ ಹಂತದ ಕಾಮಗಾರಿ ಅನುಷ್ಠಾನಕ್ಕೆ 250 ಕೋಟಿ ರೂ.
ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆ ಸ್ಥಾಪನೆಗೆ ಕ್ರಮ.
ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗಳಲ್ಲಿ ಗುಣಮಟ್ಟ ಪರೀಕ್ಷೆ ಮತ್ತು ಶ್ರೇಣೀಕರಣಕ್ಕಾಗಿ Assayer ಗಳ ನಿಯೋಜನೆ
ರೇಷ್ಮೆ ಅಭಿವೃದ್ಧಿ ಯೋಜನೆಗೆ 55 ಕೋಟಿ ರೂ. ಅನುದಾನ
ಪಶುಸಂಗೋಪನೆ
“ಅನುಗ್ರಹ” ಯೋಜನೆಯಡಿ ಪರಿಹಾರ ಮೊತ್ತ ಹೆಚ್ಚಳ; ಹಸು, ಎಮ್ಮೆ ಮತ್ತು ಎತ್ತುಗಳಿಗೆ 15 ಸಾವಿರ ರೂ., ಕುರಿ/ ಮೇಕೆಗಳಿಗೆ 7500 ರೂ., ಕುರಿ/ ಮೇಕೆ ಮರಿಗಳಿಗೆ 5 ಸಾವಿರ ರೂ. ಗಳಿಗೆ ಹೆಚ್ಚಳ.
50 ನೂತನ ಪಶು ಚಿಕಿತ್ಸಾಲಯಗಳ ಪ್ರಾರಂಭಕ್ಕೆ ಕ್ರಮ.
2025-26ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳ ನಿರ್ಮಾಣ
ರಾಜ್ಯದ ದೇಶಿ ದನ ಹಾಗೂ ಕುರಿ ತಳಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಎರಡು ಕೋಟಿ ರೂ.
ಮೀನುಗಾರಿಕೆ
ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜು ವಿದ್ಯಾರ್ಥಿಗಳ ಸಂಖ್ಯಾಬಲ ದ್ವಿಗುಣ
ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳ ಅಭಿವೃದ್ಧಿಗೆ 30 ಕೋಟಿ ರೂ.
ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಗೆ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು.
ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಮೀರಿದ ಇಂಜಿನ್‌ ಬದಲಾವಣೆಗೆ ಗರಿಷ್ಠ ಒಂದು ಲಕ್ಷ ರೂ. ಸಹಾಯಧನ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ “ಮಲ್ಟಿ ಲೆವಲ್‌ ಪಾರ್ಕಿಂಗ್‌” ವ್ಯವಸ್ಥೆ ನಿರ್ಮಾಣ
ಆಳ ಸಮುದ್ರ ಮೀನುಗಾರಿಕೆ ಪ್ರೋತ್ಸಾಹಿಸಲು ಮೀನುಗಾರಿಕೆ ದೋಣಿಗಳ ಉದ್ದದ ಮಿತಿ ಸಡಿಲಿಸಲು ಕ್ರಮ
ರಾಜ್ಯದಲ್ಲಿ ಹೊಸ ಮೀನುಗಾರಿಕಾ ನೀತಿ ಜಾರಿ
ಸಹಕಾರ
37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲ ವಿತರಣೆ ಗುರಿ.
3 ಸಾವಿರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಸಂಪೂರ್ಣ ಗಣಕೀಕರಣಕ್ಕೆ ಕ್ರಮ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ರಾಜ್ಯ ಸರ್ಕಾರದ ವತಿಯಿಂದ ಕ್ವಿಂಟಾಲ್‌ಗೆ 450 ರೂ. ಗಳಂತೆ ಒಟ್ಟು 138 ಕೋಟಿ ರೂ. ಹೆಚ್ಚುವರಿ ಪ್ರೋತ್ಸಾಹಧನ
ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು 47 ಕೋಟಿ ರೂ. ಅನುದಾನ.
ಎಪಿಎಂಸಿಗಳಲ್ಲಿನ ಪರವಾನಿಗೆ ಹೊಂದಿದ ಶ್ರಮಿಕರ ಮರಣಾನಂತರದ ವಿಮಾ ಪರಿಹಾರ ಮೊತ್ತ ಐದು ಲಕ್ಷ ರೂ.ಗಳಿಗೆ ಹೆಚ್ಚಳ.
ಬೆಂಗಳೂರಿನ ಹೊರವಲಯದಲ್ಲಿ ಹೊಸ Satellite Market ಸ್ಥಾಪನೆ.
ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲೆಯ ಬೂದುಗುಂಪ ಗ್ರಾಮದಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆ ಸ್ಥಾಪನೆ.
ಕಲಬುರಗಿಯಲ್ಲಿ ನೂತನ ಮೆಗಾ ಡೈರಿ ಪ್ರಾರಂಭಿಸಲು 50 ಕೋಟಿ ರೂ. ಅನುದಾನ ಹಾಗೂ 10 ಕೋಟಿ ರೂ. ವೆಚ್ಚದಲ್ಲಿ ಸಹಕಾರ ಭವನ ನಿರ್ಮಾಣ.
ಕಲ್ಯಾಣ ಕರ್ನಾಟಕದಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಉಗ್ರಾಣಗಳ ನಿರ್ಮಾಣ.
ಜಲಸಂಪನ್ಮೂಲ
ಎತ್ತಿನಹೊಳೆ ಯೋಜನೆ ಅಡಿ ಎಲ್ಲಾ ಎಂಟು ವಿಯರ್‌ಗಳಲ್ಲಿ ಲಭ್ಯವಾಗುವ ನೀರನ್ನು ಕಾಲುವೆಯ ಸರಪಳಿ:241 ಕಿ.ಮೀ ವರೆಗೆ ಹರಿಸಲು ಕ್ರಮ.
ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರ್ಕಾರದಿಂದಲೇ ಅಗತ್ಯ ಅನುದಾನ; 2,611 ಕೋಟಿ ರೂ. ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಯಡಿ 30 ಕೆರೆ ತುಂಬಿಸಿ 1.77 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಸಾಮರ್ಥ್ಯ ಸೃಜನೆ.
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರಡಿ ಮುಳುಗಡೆಯಾಗುವ ಜಮೀನುಗಳನ್ನು ಒಪ್ಪಂದ ಐತೀರ್ಪಿನ ಮುಖಾಂತರ ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಿ ಪರಿಹಾರ ವಿತರಣೆಗೆ ಕ್ರಮ.
ಮೇಕೆದಾಟು ಸಮತೋಲನ ಜಲಾಶಯ ಯೋಜನೆಯಡಿ ಮುಳುಗಡೆ ಜಮೀನುಗಳ ಸರ್ವೆ ಕಾರ್ಯ ಪೂರ್ಣ.
ಕಳಸಾ-ಬಂಡೂರಾ ನಾಲಾ ತಿರುವು ಯೋಜನೆಯಡಿ ಕೇಂದ್ರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿ ಪ್ರಾರಂಭ.
ಕೃಷ್ಣಾ, ಕಾವೇರಿ ಮತ್ತು ಇತರ ನದಿಗಳ ಕಣಿವೆಯಡಿ ವಿವಿಧ ಯೋಜನೆಗಳಡಿ ಬಾಕಿ ಇರುವ ಕಾಮಗಾರಿ ಪೂರ್ಣಗೊಳಿಸಲು ಕ್ರಮ.
ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡ ಅನುಷ್ಠಾನ.
ತುಂಗಭದ್ರಾ ಜಲಾಶಯದಲ್ಲಿ ಹೂಳಿನಿಂದಾಗಿ ನೀರು ಸಂಗ್ರಹದಲ್ಲಿ ಆಗಿರುವ ಕೊರತೆ ಸರಿದೂಗಿಸಲು ಪರ್ಯಾಯ ಕ್ರಮಗಳ ಪರಿಶೀಲನೆ.
ಸಣ್ಣ ನೀರಾವರಿ
ಎತ್ತಿನಹೊಳೆ ಯೋಜನೆಯಡಿ ಮಧುಗಿರಿ ತಾಲ್ಲೂಕಿನ 45 ಹಾಗೂ ಕೊರಟಗೆರೆ ತಾಲ್ಲೂಕಿನ 62 ಕೆರೆ ತುಂಬಿಸುವ ಯೋಜನೆ 553 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನ
ವೃಷಭಾವತಿ ವ್ಯಾಲಿ ಮೊದಲನೇ ಹಂತದಲ್ಲಿ 70 ಕೆರೆ ತುಂಬಿಸುವ
1080 ಕೋಟಿ ಯೋಜನೆ, ಹೆಚ್‌.ಎನ್ ವ್ಯಾಲಿ 2ನೇ ಹಂತದ ಯೋಜನೆಯಡಿ 70 ಕೋಟಿ ರೂ. ಮೊತ್ತದಲ್ಲಿ 24 ಕೆರೆ ಹಾಗೂ 93.50 ಕೋಟಿ ರೂ. ಮೊತ್ತದಲ್ಲಿ ಬೆಂಗಳೂರು ಪೂರ್ವ ತಾಲ್ಲೂಕಿನ 18 ಕೆರೆ ತುಂಬಿಸುವ ಯೋಜನೆ ಹಾಗೂ ಇತರೆ ಮುಂದುವರೆದ ಯೋಜನೆಗಳ ಪೂರ್ಣಗೊಳಿಸಲು ಕ್ರಮ.
2025-26 ರಲ್ಲಿ 2 ಸಾವಿರ ಕೋಟಿ ರೂ. ಮೊತ್ತದ ಹೊಸ ಕಾಮಗಾರಿಗಳ ಪ್ರಾರಂಭ.
ಶಾಲಾ ಶಿಕ್ಷಣ
ಎಡಿಬಿ ನೆರವಿನಲ್ಲಿ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆ ಪ್ರಾರಂಭಿಸಲು ಕ್ರಮ.
ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಯೋಜನೆ 5ಸಾವಿರ ಶಾಲೆಗಳಿಗೆ ವಿಸ್ತರಣೆ.
ಪ್ರಾಥಮಿಕ ಹಂತದಿಂದ ಪಿಯು ಹಂತದವರೆಗಿನ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ನೀಡುತ್ತಿರುವ ಮಾಸಿಕ ಗೌರವಧನ ತಲಾ 2 ಸಾವಿರ ರೂ. ಹೆಚ್ಚಳ.
ಬಿಸಿಯೂಟ ತಯಾರಿಕೆ ಸಿಬ್ಬಂದಿ ಗೌರವಧನ 1ಸಾವಿರ ರೂ. ಹೆಚ್ಚಳ.
ರಾಜ್ಯದ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ 50 ಪ್ರೌಢಶಾಲೆಗಳ ಉನ್ನತೀಕರಣಕ್ಕೆ ಕ್ರಮ.
ʻನಿರಂತರʼ ಕಾರ್ಯಕ್ರಮದಡಿ ಮಕ್ಕಳ ಹಾಜರಾತಿಯನ್ನು ಖಚಿತಪಡಿಸಲು Face Recognition ತಂತ್ರಜ್ಞಾನದ ಅಳವಡಿಕೆ.
ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು 4 ಸಾವಿರ ಶಾಲೆಗಳಲ್ಲಿ ದ್ವಿಭಾಷಾ ವಿಭಾಗ ಪ್ರಾರಂಭ.
ರಾಜ್ಯದ 500 ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್‌ ಮತ್ತು ವಿಜ್ಞಾನ ಪ್ರಯೋಗಾಲಯ ಸೌಲಭ್ಯ ವಿಸ್ತರಣೆ.
7,500 ಶಾಲಾ-ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಐಟಿಐಗಳಲ್ಲಿ ತರಬೇತಿ.
ಶಾಲೆ-ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ 725 ಕೋಟಿ ರೂ. ಹಾಗೂ ಪೀಠೋಪಕರಣ ಒದಗಿಸಲು 50 ಕೋಟಿ ರೂ. ಬಿಡುಗಡೆ.
ಮಧ್ಯಾಹ್ನ ಉಪಹಾರ ಯೋಜನೆಯಡಿ 16,347 ಶಾಲೆಗಳ ಅಡುಗೆಮನೆ ನವೀಕರಣ ಹಾಗೂ ಪಾತ್ರೆ ಪರಿಕರ ಪೂರೈಕೆಗೆ 46 ಕೋಟಿ ರೂ.
ಅಕ್ಷರ ಆವಿಷ್ಕಾರ ಯೋಜನೆ ಅಡಿ 200 ಕೋಟಿ ರೂ. ವೆಚ್ಚದಲ್ಲಿ ಕೆ.ಪಿ.ಎಸ್.‌ ಶಾಲೆಗಳನ್ನಾಗಿ ಕಲ್ಯಾಣ ಕರ್ನಾಟಕ ಭಾಗದ 50 ಶಾಲೆಗಳ ಉನ್ನತೀಕರಣ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ. ಇಲಾಖೆಯಲ್ಲಿರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಇನ್ನೂ
5 ಸಾವಿರ ಹುದ್ದೆ ಭರ್ತಿಗೆ ಕ್ರಮ.
ಉನ್ನತ ಶಿಕ್ಷಣ
ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂ‍ಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಗೆ ವಿಶ್ವಬ್ಯಾಂಕ್‌ ನೆರವಿನ 2500 ಕೋಟಿ ರೂ. ವೆಚ್ಚದ ಯೋಜನೆ ಜಾರಿ.
ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ|| ಮನಮೋಹನ್‌ ಸಿಂಗ್‌ ಬೆಂಗಳೂರು ನಗರ ಕೇಂದ್ರ ವಿಶ್ವವಿದ್ಯಾಲಯ ಎಂದು ಮರುನಾಮಕರಣ.
26 ಸರ್ಕಾರಿ ಮಹಿಳಾ ಕಾಲೇಜುಗಳು ಸೇರಿದಂತೆ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು, ಪಾಲಿಟೆಕ್ನಿಕ್‌ ಹಾಗೂ ಪದವಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ 301 ಕೋಟಿ ರೂ. ಅನುದಾನ. ಹೊಸದಾಗಿ ಪ್ರಾರಂಭಿಸಿದ ಪಾಲಿಟೆಕ್ನಿಕ್‌, ಇಂಜಿನಿಯರಿಂಗ್‌ ಕಾಲೇಜುಗಳಿಗೆ 10 ಕೋಟಿ ರೂ. ನೆರವು.
ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ವೃತ್ತಿಪರ ವಿಷಯ ತಜ್ಞರನ್ನು ʻProfessor of Practiceʼ ರನ್ನಾಗಿ ನೇಮಕ
30 ಕೋಟಿ ರೂ. ವೆಚ್ಚದಲ್ಲಿ UUCMS ತಂತ್ರಾಂಶ ಉನ್ನತೀಕರಣ
ಚಿಂತಾಮಣಿ ತಾಲ್ಲೂಕಿನಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜು ಸ್ಥಾಪನೆ.
10 ಕೋಟಿ ರೂ. ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಭಾಗದ 23 ಸಾವಿರ ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ನರ ವೈಜ್ಞಾನಿಕ ಖಾಯಿಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (KaBHI) ಯೋಜನೆ ಈ ವರ್ಷ ಎಲ್ಲಾ ಹಂತದ ಆರೋಗ್ಯ ಕೇಂದ್ರಗಳಿಗೆ ವಿಸ್ತರಣೆ; 20 ಕೋಟಿ ರೂ. ಅನುದಾನ.
ಮಾನಸಿಕ ಅಸ್ವಸ್ಥರ ಆರೈಕೆಗೆ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಆರೈಕೆ ಕೇಂದ್ರಗಳ ಸ್ಥಾಪನೆ.
ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣ ಇಳಿಸಲು 320 ಕೋಟಿ ರೂ. ಅನುದಾನ.
ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳು:
ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಯ ಸುಸಜ್ಜಿತ ಆಸ್ಪತ್ರೆ ನಿರ್ಮಾಣ;
ಹೊಸದಾಗಿ ಘೋಷಣೆಯಾಗಿರುವ 10 ತಾಲ್ಲೂಕುಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ
8 ತಾಲ್ಲೂಕು ಆಸ್ಪತ್ರೆ ಹಾಗೂ 2 ಜಿಲ್ಲಾ ಆಸ್ಪತ್ರೆಗಳ ನವೀಕರಣಕ್ಕೆ 650 ಕೋಟಿ ರೂ.,
ಪುತ್ತೂರು ತಾಲ್ಲೂಕು ಆಸ್ಪತ್ರೆ ಉನ್ನತೀಕರಣ; ಮೊಳಕಾಲ್ಮೂರು ಮತ್ತು ವಿರಾಜಪೇಟೆಯಲ್ಲಿ 200 ಹಾಗೂ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸ್ಥಾಪನೆ,
183 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳ ದುರಸ್ತಿ ಹಾಗೂ ನವೀಕರಣಕ್ಕೆ ಕ್ರಮ.
ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಯೋಜನೆಗಳ ಜಾರಿ.
ಸರ್ಕಾರದ ಗುತ್ತಿಗೆ / ಹೊರಗುತ್ತಿಗೆ / ಗೌರವಧನ ಆಧಾರದಲ್ಲಿ ಕಾರ್ಯನಿರ್ವಹಿಸುವ 3 ಲಕ್ಷಕ್ಕೂ ಅಧಿಕ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ ಸೌಲಭ್ಯ.
ಕಲ್ಯಾಣ ಕರ್ನಾಟಕ ಮತ್ತು ಗಣಿ ಬಾಧಿತ ಪ್ರದೇಶದಲ್ಲಿ ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾಯಿಲೆ ಪತ್ತೆ ಹಾಗೂ ಗರ್ಭಕಂಠದ ಕ್ಯಾನ್ಸರ್‌ ತಡೆಯಲು 19 ಕೋಟಿ ರೂ.
100 ಕೋಟಿ ರೂ. ವೆಚ್ಚದಲ್ಲಿ ಆರು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸೆ ನೀಡುವ ʻಗೃಹ ಆರೋಗ್ಯʼ ಯೋಜನೆ ರಾಜ್ಯಾದ್ಯಂತ ವಿಸ್ತರಣೆ.
ʻಆರೋಗ್ಯ ಕವಚʼ ಸೇವೆ ಬಲಪಡಿಸಲು ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೊಳಪಡಿಸಲು ಕ್ರಮ.
ಸಾಂಕ್ರಾಮಿಕ ರೋಗಗಳಾದ ಚಿಕೂನ್‌ಗುನ್ಯ, ಡೆಂಗ್ಯೂ ಹಾಗೂ ಮಲೆನಾಡು ಭಾಗದಲ್ಲಿ ಕಾಣಿಸಿಕೊಳ್ಳುವ ಕ್ಯಾಸನೂರು ಖಾಯಿಲೆ (KFD) ಮುಂಜಾಗ್ರತಾ ನಿಯಂತ್ರಣ ಕ್ರಮಗಳಿಗೆ 50 ಕೋಟಿ ರೂ.
“ಶ್ರವಣ ಸಂಜೀವಿನಿ” ಯೋಜನೆಯಡಿ ಕಾಕ್ಲಿಯರ್‌ ಇಂಪ್ಲಾಂಟ್‌ ಶಸ್ತ್ರಚಿಕಿತ್ಸೆ ಹಾಗೂ ಇಂಪ್ಲಾಂಟ್‌ಗಳ ಬಿಡಿಭಾಗಗಳ ನಿರ್ವಹಣೆಗೆ 12 ಕೋಟಿ ರೂ.
ಆಶಾ ಕಾರ್ಯಕರ್ತೆಯರ ತಂಡಾಧಾರಿತ ಗೌರವಧನ ಸಾವಿರ ರೂ. ಹೆಚ್ಚಳ.
ಸುಟ್ಟಗಾಯಗಳ ತಡೆಗಟ್ಟುವಿಕೆ ಮತ್ತು ಸಂತ್ರಸ್ತ ಮಹಿಳೆಯರ ಚಿಕಿತ್ಸೆಗಾಗಿ ರಾಜ್ಯ ನೀತಿ ಜಾರಿ.
ವೈದ್ಯಕೀಯ ಶಿಕ್ಷಣ
ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ವೈದ್ಯಕೀಯ ಕಾಲೇಜು ಹಾಗೂ ಕೋಲಾರದಲ್ಲಿ ಪಿಪಿಪಿ ಆಧಾರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ.
ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು 297 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲು ಕ್ರಮ.
ರಾಜ್ಯದ 22 ವೈದ್ಯಕೀಯ ಕಾಲೇಜುಗಳಲ್ಲಿ ಅಲೈಡ್‌ ಹೆಲ್ತ್‌ ಸೈನ್ಸ್‌ ಕೋರ್ಸ್‌ಗಳ ಪ್ರಾರಂಭ.
ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಹಾಗೂ ಚಿತ್ರದುರ್ಗದಲ್ಲಿ ಸುಸಜ್ಜಿತ ಟ್ರಾಮಾ ಕೇರ್‌ ಕೇಂದ್ರ ಸ್ಥಾಪನೆ.
ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ
100 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಎಂಡೋಕ್ರೈನಾಲಜಿ ಕೇಂದ್ರ ಪ್ರಾರಂಭ.
ತಲಾ 100 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಮತ್ತು ಕಲಬುರಗಿಯ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್‌ ಮಾದರಿಯ ಸಂಸ್ಥೆಗಳ ಸ್ಥಾಪನೆ.
ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ.
ರಾಯಚೂರಿನಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪೆರಿಫರೆಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪನೆ.
ಯಲಬುರ್ಗಾ, ಜೇವರ್ಗಿ ಮತ್ತು ಯಾದಗಿರಿಯಲ್ಲಿ ತಲಾ 6 ಕೋಟಿ ರೂ. ವೆಚ್ಚದಲ್ಲಿ ನರ್ಸಿಂಗ್‌ ಕಾಲೇಜು ಪ್ರಾರಂಭ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 1 ಸಾವಿರ ರೂ. ಹಾಗೂ ಸಹಾಯಕಿಯರ ಗೌರವಧನ 750 ರೂ. ಹೆಚ್ಚಳ.
ಸಕ್ಷಮ ಅಂಗನವಾಡಿ ಯೋಜನೆಯಡಿ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು 175 ಕೋಟಿ ರೂ. ನೆರವು.
ಅಂಗನವಾಡಿ ಕಟ್ಟಡಗಳಿಗೆ ಸಿ.ಎ. ನಿವೇಶನ ಖರೀದಿಗಾಗಿ 10 ಕೋಟಿ ರೂ.
ವಿಕಲಚೇತನರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ವಿಕಲಚೇತನರ ಸಮೀಕ್ಷೆ ನಡೆಸಲು ಕ್ರಮ.
ಮೈಸೂರಿನ ದೃಷ್ಟಿದೋಷವುಳ್ಳ ಮಕ್ಕಳ ಸರ್ಕಾರಿ ವಸತಿಯುತ ಶಾಲೆ ಹಾಗೂ ಬೆಳಗಾವಿಯಲ್ಲಿರುವ ಶ್ರವಣದೋಷವುಳ್ಳ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳ ಅಭಿವೃದ್ಧಿಗೆ 5 ಕೋಟಿ ರೂ.
ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಗಳಿಂದ ಬಳಲುತ್ತಿರುವವರ ಆರೈಕೆದಾರರಿಗೆ ಮಾಸಿಕ 1 ಸಾವಿರ ರೂ. ಪ್ರೋತ್ಸಾಹಧನ ಯೋಜನೆ ವಿಸ್ತರಣೆ.
ವಿಶೇಷ ಪಾಲನಾ ಯೋಜನೆಯಡಿ ಹೆಚ್‌.ಐ.ವಿ. ಸೋಂಕಿತ ಮತ್ತು ಬಾಧಿತ ಮಕ್ಕಳಿಗೆ ನೀಡುವ ಮಾಸಿಕ ಧನಸಹಾಯ 2 ಸಾವಿರ ರೂ.ಗೆ ಹೆಚ್ಚಳ
ರಾಜ್ಯ ಅನುದಾನದಡಿಯಲ್ಲಿರುವ ವಸತಿಯುತ ವಿಶೇಷ ಶಾಲೆಗಳ ಮಕ್ಕಳ ಪಥ್ಯಾಹಾರ ಭತ್ಯೆ ಮಾಸಿಕ 1,750 ರೂ.ಗಳಿಗೆ ಹೆಚ್ಚಳ.
ಬಳ್ಳಾರಿಯ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಹಾಗೂ ಹುಬ್ಬಳ್ಳಿಯ ದೃಷ್ಟಿದೋಷವುಳ್ಳ ಮಕ್ಕಳ ಶಾಲೆಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಪ್ರೌಢ ಶಾಲಾ ಹಂತಕ್ಕೆ ಮೇಲ್ದರ್ಜೆಗೇರಿಸಲು ಕ್ರಮ.
ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 94,084 ಕೋಟಿ ರೂ. ಆಯವ್ಯಯ ಹಂಚಿಕೆ.
ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 62,033 ಕೋಟಿ ರೂ. ಆಯವ್ಯಯ ಹಂಚಿಕೆ
ಸಮಾಜ ಕಲ್ಯಾಣ
ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿ 2025-26ನೇ ಸಾಲಿನಲ್ಲಿ ಒಟ್ಟಾರೆ 42,018 ಕೋಟಿ ರೂ. ಅನುದಾನ ನಿಗದಿ. ಪರಿಶಿಷ್ಟ ಜಾತಿ ಉಪಯೋಜನೆಗೆ 29,992 ಕೋಟಿ ರೂ. ಹಾಗೂ ಬುಡಕಟ್ಟು ಉಪಯೋಜನೆಗೆ 12,026 ಕೋಟಿ ರೂ. ಆಯವ್ಯಯ ನಿಗದಿ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ-1, 2A ಮತ್ತು 2B ಗುತ್ತಿಗೆದಾರರಿಗೆ ಕಾಮಗಾರಿಗಳಲ್ಲಿ ಪ್ರಸ್ತುತ ನೀಡಲಾಗುತ್ತಿರುವ ಮೀಸಲಾತಿ ಎರಡು ಕೋಟಿ ರೂ.ಗಳಿಗೆ ಹೆಚ್ಚಳ. 1 ಕೋಟಿ ರೂ. ವರೆಗಿನ ಸರಕು ಖರೀದಿ ಮತ್ತು ಸೇವೆಗಳನ್ನು ಪಡೆಯಲು ಸಹ ಈ ಮೀಸಲಾತಿ ಸೌಲಭ್ಯ ವಿಸ್ತರಣೆ.
ಪ್ರಗತಿ ಕಾಲೋನಿ ಯೋಜನೆಯಡಿ ಕಾಮಗಾರಿಗಳನ್ನು ಪೂರ್ಣಗೊಳಿಸಲು 222 ಕೋಟಿ ರೂ. ಅನುದಾನ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಒಟ್ಟು 31 ವಸತಿ ಶಾಲೆಗಳನ್ನು ಪಿ.ಯು ಕಾಲೇಜನ್ನಾಗಿ ಉನ್ನತೀಕರಣ.
26 ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹೊಸ ವಸತಿ ಶಾಲೆಗಳ ಪ್ರಾರಂಭ.
ಒಟ್ಟು 61 ಕ್ರೈಸ್‌ ವಸತಿ ಶಾಲೆಗಳಿಗೆ 1,292 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ಹಾಗೂ 213 ಕೋಟಿ ರೂ. ವೆಚ್ಚದಲ್ಲಿ ಕ್ರೈಸ್‌ ವಸತಿ ಶಾಲೆಗಳಿಗೆ ಶೈಕ್ಷಣಿಕ ಮೂಲಸೌಕರ್ಯ.
34 ವಿದ್ಯಾರ್ಥಿನಿಲಯಗಳಿಗೆ 238 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ
ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ 2025-26 ನೇ ಸಾಲಿನಲ್ಲಿ 488 ಕೋಟಿ ರೂ. ಅನುದಾನ ನಿಗದಿ.
ದೇಶದ ಪ್ರತಿಷ್ಠಿತ 100 ಶಿಕ್ಷಣ ಸಂಸ್ಥೆಗಳಲ್ಲಿ ಪದವಿ/ ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡಲು ಪ್ರೋತ್ಸಾಹಧನ.
ಸರ್ಕಾರಿ ಹಾಗೂ ಖಾಸಗಿ ಮೆಡಿಕಲ್‌ ಮತ್ತು ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದು, ಅದೇ ಹಾಸ್ಟೆಲಿನಲ್ಲಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಮಾಸಿಕ 3,500 ರೂ. ನೆರವು.
ಪರಿಶಿಷ್ಟ ವರ್ಗಗಳ ಕಲ್ಯಾಣ
78 ಬುಡಕಟ್ಟು ವಸತಿ ಶಾಲೆಗಳಲ್ಲಿ 7ನೇ ತರಗತಿ ಪ್ರಾರಂಭ. ಐದು ವಸತಿ ಶಾಲೆಗಳು 12ನೇ ತರಗತಿಯವರೆಗೆ ಮೇಲ್ದರ್ಜೆಗೆ.
ಪರಿಶಿಷ್ಟ ಪಂಗಡದ 20 ಹೊಸ ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯ ಪ್ರಾರಂಭ.
ಲ್ಯಾಂಪ್ಸ್‌ (LAMPS) ಸಹಕಾರ ಸಂಘಗಳಿಗೆ ದುಡಿಯುವ ಬಂಡವಾಳ ರೂಪದಲ್ಲಿ ತಲಾ ಐದು ಲಕ್ಷ ರೂ. ಸಹಾಯಧನ
ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ ಮೂಲಸೌಕರ್ಯ ವಂಚಿತ ಬುಡಕಟ್ಟುಗಳ ಜನಾಂಗದವರಿಗೆ ಮೂಲಸೌಕರ್ಯಗಳನ್ನು ಒದಗಿಸಲು 200 ಕೋಟಿ ರೂ.
ರಾಜ್ಯ ಸಿವಿಲ್‌ ಸೇವೆಗಳಲ್ಲಿ ಅರಣ್ಯ, ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ 13 ಬುಡಕಟ್ಟು ಜನಾಂಗಗಳ ಅಭ್ಯರ್ಥಿಗಳ ವಿಶೇಷ ನೇರ ನೇಮಕಾತಿಗೆ ಕ್ರಮ
ಹಿಂದುಳಿದ ವರ್ಗಗಳ ಕಲ್ಯಾಣ
ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ
422 ಕೋಟಿ ರೂ. ಅನುದಾನ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ.
ಹಿಂದುಳಿದ ವರ್ಗಗಳ ನಿಗಮಗಳ ಮೂಲಕ ನಿರುದ್ಯೋಗಿಗಳಿಗೆ ವಿದ್ಯುತ್‌ ಚಾಲಿತ ನಾಲ್ಕು ಚಕ್ರಗಳ ವಾಹನದಲ್ಲಿ, ಆಹಾರ ಕಿಯೋಸ್ಕ್‌ ಪ್ರಾರಂಭಿಸಲು ತಲಾ 3 ಲಕ್ಷ ರೂ. ವರೆಗೆ ಸಹಾಯಧನ ಸೌಲಭ್ಯ.
ಅತ್ಯಂತ ಹಿಂದುಳಿದ 46 ಅಲೆಮಾರಿ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ವತಿಯಿಂದ ಸಂಗೊಳ್ಳಿ ಮತ್ತು ನಂದಗಡದಲ್ಲಿ 28 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿ.
ಇಂಜಿನಿಯರಿಂಗ್‌ ಮತ್ತು ಮೆಡಿಕಲ್‌ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು 15 ಕೋಟಿ ರೂ.
ವಿದ್ಯಾರ್ಥಿ ನಿಲಯಗಳ ಕಟ್ಟಡಗಳ ರಿಪೇರಿ/ದುರಸ್ತಿ ಮಾಡಲು 25 ಕೋಟಿ ರೂ.

ಇತ್ತೀಚಿನ ಸುದ್ದಿ

ಜಾಹೀರಾತು