7:20 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ, ವಸ್ತು ಕಳ್ಳತನ

01/05/2026, 17:46

ಬೆಂಗಳೂರು(reporterkarnataka.com): ಜ್ಯುವೆಲ್ಲರಿ ಶಾಪ್ ಕೊರೆದು ಕಳ್ಳರು ಕೋಟ್ಯಂತರ ರೂಪಾಯಿ ಬೆಳ್ಳಿ ಆಭರಣ, ವಸ್ತುಗಳನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಎಂಬಿ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಕಳ್ಳತನ ನಡೆದಿದೆ.
ಗೋಡೆ ಕೊರೆದು ಜಿನ್ನದಂಗಡಿಗೆ ನುಗ್ಗಿರುವ ಕಳ್ಳರು ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ, ಬೆಳ್ಳಿ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಅತ್ಯಂತ ಯೋಜಿತವಾಗಿ ಕಳ್ಳತನ ಮಾಡಲಾಗಿದೆ. ಜ್ಯುವೆಲ್ಲರಿ ಶಾಪ್‌ನ ಹಿಂಭಾಗದ ರೂಮ್‌ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ನಂತರ ಗೋಡೆಯನ್ನು ಕೊರೆದು ಮಳಿಗೆಯೊಳಗೆ ಪ್ರವೇಶಿಸಿ ಸುಮಾರು 70 ಕೆಜಿ ಬೆಳ್ಳಿ ವಸ್ತುಗಳ್ಳನ್ನು ಕದ್ದಿದ್ದಾರೆ.
ಕಳ್ಳತನದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬಾಗಲಗುಂಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮಳಿಗೆಯಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಹಾಗೂ ಕಳ್ಳರು ಗೋಡೆ ಕೊರೆಯಲು ಬಳಸಿದ ವಿಧಾನಗಳನ್ನು ಪೊಲೀಸರು ಗಮನಿಸುತ್ತಿದ್ದಾರೆ. ಸದ್ಯ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರಿಗಾಗಿ ತೀವ್ರ ಶೋಧ ಕಾರ್ಯ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು