8:40 PM Wednesday12 - March 2025
ಬ್ರೇಕಿಂಗ್ ನ್ಯೂಸ್
Budget Session | ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ವಿಧಾನ ಪರಿಷತ್ ನಲ್ಲಿ… KPSC ಪರೀಕ್ಷೆಯಲ್ಲಿ ಲೋಪ; ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ Central v/s State | ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಿಲುವು: ಸಿಎಂ… Education | ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ: ಸಚಿವ ಡಾ.ಎಂ.ಸಿ… ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಬಿಜೆಪಿ ವಿರೋಧ; ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ… Global warming | ಹೆಚ್ಚುತ್ತಿರುವ ತಾಪಮಾನ: ಮೈಸೂರು ಝೂ ಪ್ರಾಣಿಗಳಿಗೆ ವಾಟರ್ ಜೆಟ್,… ರಂಜಾನ್ ಮಾಸ: ಸಮೋಸಕ್ಕೆ ಭಾರೀ ಡಿಮಾಂಡ್; ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಮಾರಾಟ ರೈತರ ಐಪಿ ಸೆಟ್‌ಗಳಿಗೆ ಹೆಚ್ಚುವರಿ 2 ತಾಸು ವಿದ್ಯುತ್‌ ಪೂರೈಕೆ ಬಗ್ಗೆ ಸರಕಾರ… Higher Education | ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಿಸಲು ಆದ್ಯತೆ::ಉನ್ನತ ಶಿಕ್ಷಣ ಸಚಿವ… APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ

ಇತ್ತೀಚಿನ ಸುದ್ದಿ

ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರದ ಬೆಳ್ಳಿಹಬ್ಬ: ಮಾರ್ಚ್ 16ರಂದು ‘ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ’ ಜಾಥಾ

12/03/2025, 20:34

ಮಂಗಳೂರು(reporterkarnataka.com):ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ದಕ್ಷಿಣ ವಲಯದ ಮುಂದಾಳತ್ವದಲ್ಲಿ ಮಂಗಳೂರು ದಕ್ಷಿಣ ವಲಯದ ಎಲ್ಲ ಚರ್ಚಿನ ಧರ್ಮಗುರುಗಳು, ಧರ್ಮಭಗಿನಿಯರು, ಪಾಲನಾ ಮಂಡಳಿಗಳು, ವಿವಿಧ ಸಂಘ ಸಂಸ್ಥೆಗಳು, ಕಥೊಲಿಕ್ ವಿದ್ಯಾಸಂಸ್ಥೆಗಳು ಹಾಗೂ 21 ಆಯೋಗದ ಸಹಭಾಗಿತ್ವದಲ್ಲಿ ತಪಸ್ಸು ಕಾಲದ ಆಧ್ಯಾತ್ಮಿಕ ಪ್ರೇರಣೆಯಾಗಿ ಮುಡಿಪು
ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರದ ಬೆಳ್ಳಿ ಹಬ್ಬದ ಪ್ರಯುಕ್ತ ಮಹಾನ್ ಕಾಲ್ನಡಿಗೆ ಜಾಥಾ “ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ” ಎಂಬ ಜಾಥಾ ಮಾರ್ಚ್ 16ರಂದು ನಡೆಯಲಿದೆ.
ಮಂಗಳೂರು ದಕ್ಷಿಣ ವಲಯದ ಕಥೊಲಿಕ್ ಸಭಾದ ಅಧ್ಯಕ್ಷರ ಡೊಲ್ಫಿ ಡಿಸೋಜ ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಕೋಟೆಕಾರು ಗ್ರಾಮದ ದಯಾಮಾತಾ ದೇವಾಲಯದ ಪಾನೀರ್‌ನಲ್ಲಿ ವಿಶ್ರಾಂತ ಬಿಷಪ್ ಅತೀ ವಂದನೀಯ ಡಾ. ಅಲೋಶಿಯಸ್ ಪೌಲ್ ಡಿಸೋಜ ಅವರಿಂದ ಆಶೀರ್ವಚನ ಹಾಗೂ ವಂದನೀಯ ಫಾ। ವಿಕ್ಟರ್ ಡಿಮೆಲ್ಲೊರವರು ಉದ್ಘಾಟಿಸಲಿರುವರು. ಸಮಾರೋಪ ಕಾರ್ಯಕ್ರಮದಲ್ಲಿ ಅತೀ ವಂದನೀಯ ಫಾ| ಆಸ್ಸಿಸಿ ರೆಬೆಲ್ಲೊರವರು ಮತ್ತು ಫಾ| ಸಂತೋಷ್ ಮಿನೇಜಸ್‘ರವರು ಪ್ರಾರ್ಥನೆಯನ್ನು ನೆರವೇರಿಸುವರು. ಅತೀ ವಂದನೀಯ ಫಾ। ಸಿಪ್ರಿಯನ್ ಪಿಂಟೊರವರು ಪರಮ ಪ್ರಸಾದದ ಆಶೀರ್ವಚನವನ್ನು ನೆರವೇರಿಸುವರು. ಈ ಕಾರ್ಯಕ್ರಮವು ಆಧ್ಯಾತ್ಮಿಕ ಕಾರ್ಯಕ್ರಮವಾಗಿದ್ದು ಯೇಸುಕ್ರಿಸ್ತರು ಹುಟ್ಟಿ 2025 ವರ್ಷಗಳು(ಮಹೋತ್ಸವ) ತುಂಬಿದ ಸಂದರ್ಭದಲ್ಲಿ ಹಾಗೂ ತಪಸ್ಸು ಕಾಲದ ಪರಿವರ್ತನಾ ಜಾಥಾವಾಗಿರುತ್ತದೆ. ಈ ಜಾಥಕ್ಕೆ ಸುಮಾರು 5000 ಜನರು ಸೇರಲಿದ್ದಾರೆ. ಈ ಜಾಥವು ಪಾನೀರ್ ದಯಾಮಾತಾ ದೇವಾಲಯದಿಂದ ಹೊರಟು, ದೇರಳಕಟ್ಟೆಯಿಂದ ಸಾಗಿ ನಾಟೇಕಲ್ ಮಾರ್ಗವಾಗಿ ಮುನ್ನಡೆದು ಮುಡಿಪು ಸಂತ ಜೋಸೆಫ್ ವಾಜ್’ರವರ ಪುಣ್ಯಕ್ಷೇತ್ರದಲ್ಲಿ ಕೊನೆಗೊಳ್ಳುವುದು.

ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ದಕ್ಷಿಣ ವಲಯದ ಕಥೊಲಿಕ್ ಸಭಾದ ಸಂಚಾಲಕ ಆಲ್ವಿನ್ ಡಿಸೋಜಾ ಪಾನೀರ್, ಘಟಕದ ಅಧ್ಯಕ್ಷ ರಜತ್ ವೇಗಸ್, ಸಂತ ಜೋಸೆಫ್ ವಾಜ್ ಪುಣ್ಯಕ್ಷೇತ್ರದ ಬೆಳ್ಳಿ ಹಬ್ಬದ ಸಂಚಾಲಕ ರೋಶನ್ ಡಿಸೋಜಾ, ಸಂತ ಜೋಸೆಫ್ ವಾಜ್ ಪುಣ್ಯಕ್ಷೇತ್ರದ ಉಪಾಧ್ಯಕ್ಷರಾದ ನವೀನ್ ಡಿಸೋಜಾ ಮತ್ತು ಕಾರ್ಯದರ್ಶಿಯಾದ ಸಂತೋಶ್ ಡಿಸೋಜಾ ಹಾಗೂ ಕಥೊಲಿಕ್ ಸಭಾ ಮಂಗುರ್ ಪ್ರದೇಶ್(ರಿ) ದಕ್ಷಿಣ ವಲಯದ ಉಪಾಧ್ಯಕ್ಷರಾದ ಅರುಣ್‌ ಡಿಸೋಜಾ ಅವರು ಉಪಸ್ಥಿತಲಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು