5:15 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

10/12/2025, 18:09

ಬೆಳಗಾವಿ ಸುವರ್ಣಸೌಧ (reporterkarnataka.com): ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ. ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದರು.
ಸಣ್ಣ ಕೈಗಾರಿಕೆಗಳಿಗೆ ಪೆÇ್ರೀತ್ಸಾಹ ನೀಡುವ ಉದ್ದೇಶದಿಂದ 2 ಎಕರೆವರೆಗೆ ಭೂ ಪರಿವರ್ತನೆಯ ಅವಶ್ಯಕತೆ ಇಲ್ಲದೆ ನೇರವಾಗಿ ಪ್ಲಾನ್ ಅಪೆÇ್ರೀವ್ ಮಾಡಿಸಿಕೊಳ್ಳಬಹುದಾಗಿದೆ ಹಾಗೂ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪರಿವರ್ತನೆ ಅಗತ್ಯವಿಲ್ಲ ಮತ್ತು ಕಂದಾಯ ನ್ಯಾಯಾಲಯ ನಡೆಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು