ಇತ್ತೀಚಿನ ಸುದ್ದಿ
ಸಿಂದಗಿ: ಕೆಎಸ್ಸಾರ್ಟಿಸಿ ಬಸ್- ಬೈಕ್ ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು
25/01/2023, 10:44

ಸಿಂದಗಿ(reporterkarnataka.com): ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದ ಸಮೀಪ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಿಂದಗಿ ಕಡೆಯಿಂದ ವಿಜಯಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಕೆ ಎಸ್ ಆರ್ ಟಿ.ಸಿ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದು ದಾಬಾದಿಂದ ಬರುತ್ತಿದ್ದ ಬೈಕ್ ಸವಾರ ಅಲ್ಲಾಭಕ್ಷ(20) ಎಂದು ತಿಳಿದು ಬಂದಿದೆ.
ಈತ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದ ನಿವಾಸಿಯಾಗಿದ್ದಾನೆ.
ಸಿಂದಗಿ ಪೋಲೀಸ್ ಠಾಣೆಯಲ್ಲಿ ಪ್ರಕಣ ದಾಖಲಿಸಿ ಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.