ಇತ್ತೀಚಿನ ಸುದ್ದಿ
ಸಿಂದಗಿ ಉಪ ಚುನಾವಣೆಯಲ್ಲಿ ನಾನು ಅಥವಾ ನನ್ನ ಪುತ್ರ ಸ್ಪರ್ಧಿಸುವುದಿಲ್ಲ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ
28/09/2021, 23:10
ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು,ಸಿಂದಗಿ ಕ್ಷೇತ್ರದಿಂದ ತಾನು ಅಥವಾ ತನ್ನ ಪುತ್ರ ಚಿದಾನಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.
ಸಿಂದಗಿ ಉಪ ಚುನಾವಣೆಯ ಉಸ್ತುವಾರಿಯಾಗಿ ಪಕ್ಷ ನನ್ನನ್ನು ನೇಮಿಸಿದೆ. ಉಸ್ತುವಾರಿಯಾಗಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದು ನನ್ನ ಗುರಿ. ಎರಡು ದಿನದಲ್ಲಿ ಸಿಂದಗಿ ಕ್ಷೇತ್ರಕ್ಕೆ ತೆರಳಿ ಸ್ಥಳೀಯರ ಅಭಿಪ್ರಾಯ ಸಂಗ್ರಹಣೆ ಮಾಡಲಾಗುವುದು ಎಂದರು.
ಚುನಾವಣೆ ಪ್ರಚಾರಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಬರುತ್ತಾರೆ. ಸಿಂದಗಿ, ಹಾನಗಲ್ ಎರಡು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ ಎಂದು ಲಕ್ಷ್ಮಣ್ ಸವದಿ ಭವಿಷ್ಯ ನುಡಿದರು.