5:50 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

‘ಸಿರಿಧಾನ್ಯ’ ಹಬ್ಬದ ಸಂಭ್ರಮ: ವಾಕಥಾನ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಹೆಜ್ಜೆ ಹಾಕಿದ ಜಿಲ್ಲಾಧಿಕಾರಿ, ಜಿಪಂ ಸಿಇಒ

29/12/2023, 19:48

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಸಿರಿಧಾನ್ಯ ಕೃಷಿಗೆ ಪ್ರೋತ್ಸಾಹ ಹಾಗೂ ಆಹಾರ ಅರಿವು ಮೂಡಿಸಲು ಕೃಷಿ ಇಲಾಖೆಯು ಇಂದು ಆಯೋಜಿಸಿದ್ದ ಜಿಲ್ಲಾಮಟ್ಟದ ಸಿರಿಧಾನ್ಯ ವಾಕಥಾನ್ ‘ಸಿರಿಧಾನ್ಯ ನಡಿಗೆ’ಗೆ ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮ ಬಸವಂತಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಭಾಸ್ಕರ್ ಗಾಳಿ ಬುರುಡೆಗಳನ್ನು ಹಾರಿಬಿಟ್ಟು, ಹಸಿರು ನಿಶಾನೆ ಬೀಸಿ ಚಾಲನೆ ನೀಡಿದರು. ಗಣ್ಯರೊಂದಿಗೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು ನಾಗರಿಕರು ‘ಸಮೃದ್ಧ ಸಿರಿಧಾನ್ಯ’ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ತಮ್ಮ ಎಂದಿನ ಬೆಳಗಿನ ವ್ಯಾಯಾಮವನ್ನು ವಿದ್ಯಾರ್ಥಿಗಳೊಂದಿಗೆ ಮಾಡಿದ್ದು ವಿಶೇಷವಾಗಿತ್ತು. ಇದೇ ಸಂದರ್ಭದಲ್ಲಿ ಸಿರಿಧಾನ್ಯ ಹಾಗೂ ಪೌಷ್ಟಿಕ ಆಹಾರದ ಬಗ್ಗೆ ಜಾಗೃತಿ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕೃಷಿ ಜಂಟಿ ನಿರ್ದೇಶಕರಾದ ಸುಮಾ, ಕೃಷಿ ಇಲಾಖೆಯ ಉಪನಿರ್ದೇಶಕರು ಭವ್ಯರಾಣಿ, ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಡೀನ್ ಡಾ. ಶಿವರಾಮ್, ತೋಟಗಾರಿಕೆ ಉಪನಿರ್ದೇಶಕರಾದ ಕುಮಾರಸ್ವಾಮಿ, ರೇಷ್ಮೆ ಇಲಾಖೆಯ ಉಪನಿರ್ದೇಶಕರಾದ ಎಸ್.ಎಂ ಶ್ರೀನಿವಾಸ್, ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥರು ಶಿವನಂದ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಗೀತಾ, ಕೃಷಿ ಅಧೀಕ್ಷಕರು ಮಂಜುನಾಥ ಸೇರಿದಂತೆ ಹಲವು ಇಲಾಖೆಗಳ ಜಿಲ್ಲಾ ಮುಖ್ಯಸ್ಥರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು